More

    ಮನೆ ಮನೆ ಪ್ರಚಾರ 5 ಜನಕ್ಕೆ ಮಾತ್ರ ಅವಕಾಶ

    ಬಾಗಲಕೋಟೆ: ಕೋವಿಡ್-19 ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಚುನಾವಣೆಗೂ ಸಹ ಎಸ್‌ಓಪಿ ಹೊರಡಿಸಿದ್ದು, ಚುನಾವಣಾ ಅಭ್ಯರ್ಥಿಗಳ ಪ್ರಚಾರಕ್ಕೆ ಗರಿಷ್ಟ 5 ಜನರ ಬೆಂಬಲಿಗರೊಂದಿಗೆ ಪರಸ್ಪರ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಚಾರ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ೇಸ್ ಮಾಸ್ಕ ಧರಿಸುವುದು ಕಡ್ಡಾಯವಾಗಿದೆ. ಪ್ರಚಾರಕ್ಕಾಗಿ ಮುದ್ರಿಸಿದ ಕರಪತ್ರಗಳನ್ನು ಹಂಚುವವರು ಮಾಸ್ಕ, ಸ್ಯಾನಿಟೈಜರ್ ಹಾಗೂ ಹ್ಯಾಂಡ್ ಗ್ಲೌಸ್ಸ್ ಧರಿಸಬೇಕು. ಗುಂಪು ಗುಂಪಾಗಿ ಪ್ರಚಾರ ಮಾಡುವಂತಿಲ್ಲ.

    ಸಭೆ, ಸಮಾರಂಭಗಳನ್ನು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ನಡೆಸಬಹುದಾಗಿದೆ. ಕೋವಿಡ್ ಪಾಜಿಟಿವ್ ಇರುವ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದ್ದು, ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿರುವದಿಲ್ಲ. ಆದಷ್ಟು ಇಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಮುನ್ನಚ್ಚರಿಕೆ ಕ್ರಮ
    ಕೋವಿಡ್-19 ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಕೆಲವು ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಪರಸ್ಪರ ಮುಟ್ಟದೆ ಶುಭಾಷಯಗಳನ್ನು ತಿಳಿಸುವುದು, ದೈಹಿಕ ಅಂತರ ಕಾಯ್ದುಕೊಳ್ಳುವುದು, ಮರು ಉಪಯೋಗಿಸಲ್ಪಡುವ ೇಸ್ ಕವರ್ ಅಥವಾ ಮಾಸ್ಕ ಬಳಸಬೇಕು. ಕಣ್ಣು, ಮೂರು ಮತ್ತು ಬಾಯಿಯನ್ನು ಮುಟ್ಟುವುದನ್ನು ಆದಷ್ಟು ತಡೆಯುವುದು, ಉಸಿರಾಟದ ನೈರ್ಮಲ್ಯತೆಯನ್ನು ಕಾಪಾಡುವುದು, ಕೈಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸಬೇಕು. ತಂಬಾಕು, ಖೈನಿ ಇತರೆ ಜಗಿಯುವುದನ್ನು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಮಾಡಬಾರದು. ಪರಿಶೀಲಿಸದ ಹಾಗೂ ನಕಾರಾತ್ಮಕ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸರಿಸುವಂತಿಲ್ಲ. ಕೋವಿಡ್-19 ಬಗ್ಗೆ ಅಧಿಕೃತ ಮಾಹಿತಿ ಪಡೆಯಬೇಕು. ಟೋಲ್ ಪ್ರೀ ರಾಷ್ಟ್ರೀಯ ದೂ.ಸಂ.1075, ರಾಜ್ಯ ಆರೋಗ್ಯ ಸಹಾಯವಾಣಿ 104 ಹಾಗೂ ಆಪ್ತಮಿತ್ರ ಸಹಾಯವಾಣಿ 14410 ವನ್ನು ಸಂಪರ್ಕಿಸಬಹದಾಗಿದೆ ಎಂದು ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts