More

    1 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 4 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ ಬಾದಾಮಿ ತಾಲೂಕಿನಲ್ಲಿ 1 ಕೋವಿಡ್ ಪ್ರಕರಣ ಶುಕ್ರವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13626 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13443 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 753 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 240484 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 225594 ನೆಗೆಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 47 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts