More

    4 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 4 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 4 ಕೋವಿಡ್ ಪ್ರಕರಣಗಳು ಶನಿವಾರ ದೃಢಪಟ್ಟಿವೆ. ಹೊಸದಾಗಿ ಬಾಗಲಕೋಟೆ, ಬೀಳಗಿ, ಮುಧೋಳದಲ್ಲಿ ತಲಾ 1 ಹಾಗೂ ಬೇರೆ ಜಿಲ್ಲೆ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13695 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13520 ಜನ ಗುಣಮುಖರಾಗಿದ್ದಾರೆ. ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿರುವ 5596 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 277509 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 257659 ನೆಗೆಟಿವ್ ಪ್ರಕರಣ, 136 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 39 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts