More

    153 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 95 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 153 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 5488 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 45931 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 52679 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 46099 ನೆಗೆಟಿವ್ ಪ್ರಕರಣ, 5488 ಪಾಸಿಟಿವ್ ಪ್ರಕರಣ ಹಾಗೂ 66 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 829 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 787 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 495 ಜನ ನಿಗಾದಲ್ಲಿದ್ದಾರೆ. ಇಲ್ಲಿವರೆಗೆ ಒಟ್ಟು 210 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಜೋನ್ 585 ಇದ್ದು, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ 8455 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts