More

    ಕೋವಿಡ್‌ನಿಂದ ಓರ್ವ ವ್ಯಕ್ತಿ ಗುಣಮುಖ

    ಬಾಗಲಕೋಟೆ: ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ ಯಾವುದೇ ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿಲ್ಲ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13779 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13637 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1550 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 378588 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 362695 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 6 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.


    ಕೋವಿಡ್‌ನಿಂದ ಓರ್ವ ವ್ಯಕ್ತಿ ಗುಣಮುಖ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts