More

    219 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 169 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 219 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 63, ಬಾದಾಮಿ 20, ಹುನಗುಂದ 48, ಬೀಳಗಿ 16, ಮುಧೋಳ 46, ಜಮಖಂಡಿ 21 ಹಾಗೂ ಬೇರೆ ಜಿಲ್ಲೆಯ 5 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 75479 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 65785 ನೆಗೆಟಿವ್, 7618 ಪಾಸಿಟಿವ್ ಹಾಗೂ 83 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 1139 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾದ 1764 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿವರೆಗೆ ಒಟ್ಟು 217 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಜೋನ್ 665 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts