More

    128 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 88 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 128 ಜನರಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10186 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8817 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 40, ಬಾದಾಮಿ 12, ಹುನಗುಂದ 33, ಬೀಳಗಿ 5, ಮುಧೋಳ 24, ಜಮಖಂಡಿ 14 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1569 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 102596 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 90334 ನೆಗೆಟಿವ್, 10186 ಪಾಸಿಟಿವ್ ಹಾಗೂ 105 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 1264 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಜೋನ್ 722 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts