More

    ಚಿಕಿತ್ಸೆ ಫಲಿಸದೆ ಇಬ್ಬರು ಸೋಂಕಿತರು ಮೃತ

    ಬಾಗಲಕೋಟೆ: ಜಿಲ್ಲೆಯಲ್ಲಿ 315 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 79 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9431 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8360 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 32, ಬಾದಾಮಿ 8, ಹುನಗುಂದ 12, ಬೀಳಗಿ 3, ಮುಧೋಳ 14, ಜಮಖಂಡಿ 10 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2272 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 90003 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 77793 ನೆಗೆಟಿವ್, 9431 ಪಾಸಿಟಿವ್ ಹಾಗೂ 102 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 969 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts