124 ಹೊಸ ಪ್ರಕರಣಗಳು ದೃಢ

blank

ಬಾಗಲಕೋಟೆ: ಜಿಲ್ಲೆಯಲ್ಲಿ 145 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 124 ಜನರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸೋಂಕಿತ ಶನಿವಾರ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11488 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10754 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 29, ಬಾದಾಮಿ 21, ಹುನಗುಂದ 21, ಬೀಳಗಿ 4, ಮುಧೋಳ 25, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿರುವ 1208 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 124703 ಸ್ಯಾಂಪಲ್‌ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 111496 ನೆಗಟಿವ್ ಪ್ರಕರಣ, 11488 ಪಾಜಿಟಿವ್ ಪ್ರಕರಣ ಹಾಗೂ 117 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 617 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ್ ರೆನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.





Share This Article

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…

Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?

Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…