More

    13 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 5 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 13 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ.

    ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 14025 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 13760 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 4, ಜಮಖಂಡಿ 3, ಬೀಳಗಿ, ಮುಧೋಳ, ಹುನಗುಂದ ತಲಾ 2 ಹಾಗೂ ಬೇರೆ ಜಿಲ್ಲೆಯ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 4215 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 476947 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 458143 ನೆಗೆಟಿವ್, 136 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 129 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.



    13 ಹೊಸ ಪ್ರಕರಣ ದೃಢ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts