More

    2 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 5 ಜನ ಕೋವಿಡನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 2 ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ.

    ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13658 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13507 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ಮತ್ತು ಜಮಖಂಡಿಯಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರಿಗೆ ನಿಗದಿತ ಆಸ್ಪತ್ರೆ ಮತ್ತು ಹೋಮ್ ಐಸೋಲೇಷನ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2279 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 264332 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 247884 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 15 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.



    2 ಹೊಸ ಪ್ರಕರಣ ದೃಢ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts