More

    ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಖಾಲಿ

    ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆ ಔಷಧ, ಆಕ್ಸಿಜನ್ ಕೊರತೆ ಇಲ್ಲ. 170 ಆಕ್ಸಿಜನ್ ಬೆಡ್‌ಗಳು ಖಾಲಿಯಾಗಿವೆ. ಅಲ್ಲದೆ, 23 ಬ್ಲಾೃಕ್ ಫಂಗಸ್ ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೊನಾ ಸೋಂಕು ಹಂತ ಹಂತವಾಗಿ ಇಳಿಮುಖವಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವ ಸಾಧ್ಯತೆಗಳಿವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

    ಗ್ರಾಮೀಣ ಭಾಗದಲ್ಲಿ ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮೆಡಿಸಿನ್ ಕಿಟ್‌ಗಳನ್ನು ಸಹ ಹಂಚಿಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ ಫಂಗಸ್‌ನಿಂದ ಮೃತಪಟ್ಟ ಪ್ರಕರಣಗಳು ವರದಿಯಾಗಿಲ್ಲ. ಜಮಖಂಡಿ ಮೂಲದ ರೋಗಿ ಹುಬ್ಬಳ್ಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವರದಿ ಪಡೆದುಕೊಂಡು ಬಳಿಕ ಖಚಿತ ಪಡಿಸಲಾಗುವುದು ಎಂದರು.

    ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿ.ಪ.ಸದಸ್ಯ ಹನುಮಂತ ನಿರಾಣಿ ಇದ್ದರು.

    ಲಾಕ್‌ಡೌನ್ ಸಮಯದಲ್ಲಿ ಮದುವೆ ಮನೆಯಲ್ಲಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಇದನ್ನೆ ನೆಪವಾಗಿಸಿ ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಕಳೆದ ಎರಡು ತಿಂಗಳಿನಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಪಟ್ಟಂತೆ 7 ಪ್ರಕರಣ ದಾಖಲು ಮಾಡಲಾಗಿದೆ.
    ಉಮೇಶ ಕತ್ತಿ, ಸಚಿವ

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts