More

    ಕೋವಿಡ್ ಸೆಂಟರ್ ಆರಂಭಿಸಿ

    ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಸರಿಯಾಗಿ ಬೆಡ್‌ಗಳು ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಮುಧೋಳ ಸೇರಿದಂತೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ 200 ಬೆಡ್‌ಗಳ ಕೋವಿಡ್ ಸೆಂಟರ್ ಆರಂಭಿಸಬೇಕು ಎಂದು ವಿಧಾನ ಪರಿಷತ್ತ ಸದಸ್ಯ ಆರ್.ಬಿ. ತಿಮ್ಮಾಪುರ ಆಗ್ರಹಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಗ್ರಾಮೀಣ ಭಾಗದಲ್ಲಿ ವೈದ್ಯರು, ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಿ ಬಿಸಿಎಂ ಹಾಸ್ಟೇಲ್‌ಗಳನ್ನು ಕೋವಿಡ್ ಚಿಕಿತ್ಸಾ ಕೇಂದ್ರಗಳಾಗಿ ಪರಿವರ್ತಿಸಬೇಕು. ರೆಮ್‌ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವುದು ತಪ್ಪಿಸಬೇಕು, ಅಗತ್ಯವಾದ ಆಕ್ಸಿಜನ್ ಪೂರೈಸಬೇಕು. ಅಲ್ಲದೆ ಎಲ್ಲೆಡೆ ಲಸಿಕೆ ದೊರೆಯುತ್ತಿಲ್ಲ. ಕೋವ್ಯಾಕ್ಸಿನ್, ಕೋವಿಶಿಲ್ಡ್ ಬೇಡಿಕೆ ತಕ್ಕಂತೆ ಪೂರೈಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts