More

    ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ

    ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಮಂಡಳಿಗೆ ನ.5 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳ ಮೂಲಕ ಆಯ್ಕೆ ಮಾಡುವಂತೆ ಬಾದಾಮಿ ಶಾಸಕ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಕಾರಿ ಬಂಧುಗಳಲ್ಲಿ ಮನವಿ ಮಾಡಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಾದಾಮಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ಕ್ರಿಯಾಶೀಲ ಯುವ ಮುಖಂಡ, ಜಿಪಂ ಮಾಜಿ ಸದಸ್ಯ ಡಾ.ಎಂ.ಜಿ. ಕಿತ್ತಲಿ ಸ್ಪರ್ಧಿಸಿದ್ದು, ತಾಲೂಕಿನ ಎಲ್ಲ ಪಿಕೆಪಿಎಸ್‌ಗಳ ಮತದಾರರು ಕಿತ್ತಲಿ ಅವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದ್ದಾರೆ.

    ಜಿಲ್ಲೆಯ ಬೀಳಗಿ ಪಿಕೆಪಿಎಸ್ ಕ್ಷೇತ್ರದಿಂದ ಹಿರಿಯ ಮುತ್ಸದ್ದಿ, ಸಹಕಾರಿ ಧುರೀಣ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕುರಿ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರಕ್ಕೆ ಮಾಜಿ ಶಾಸಕ ಎಚ್.ವೈ. ಮೇಟಿ, ಹುನಗುಂದ ಪಿಕೆಪಿಎಸ್ ಕ್ಷೇತ್ರಕ್ಕೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಇಳಕಲ್ಲ ಪಿಕೆಪಿಎಸ್ ಕ್ಷೇತ್ರಕ್ಕೆ ಜಿಪಂ ಮಾಜಿ ಸದಸ್ಯ ಮಹಾಂತೇಶ ನರಗುಂದ, ಮುಧೋಳ ಪಿಕೆಪಿಎಸ್ ಕ್ಷೇತ್ರಕ್ಕೆ ಜಿಪಂ ಸದಸ್ಯ ಮಹಾಂತೇಶ ಉದಪುಡಿ, ಜಮಖಂಡಿ ಪಿಕೆಪಿಎಸ್‌ಗೆ ಶಾಸಕ ಆನಂದ ಸಿದ್ದು ನ್ಯಾಮಗೌಡ, ಪಟ್ಟಣ ಸಹಕಾರ ಬ್ಯಾಂಕ್‌ಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ಶಿವಾನಂದ ಉದಪುಡಿ ಸ್ಪರ್ಧೆ ಮಾಡಿದ್ದಾರೆ. ನಮ್ಮ ಪಕ್ಷದ ಬೆಂಬಲಿತ ಈ ಅಭ್ಯರ್ಥಿಗಳನ್ನು ಆಯಾ ಸಹಕಾರ ಕ್ಷೇತ್ರಗಳ ಮತದಾರು, ಅತಿ ಹೆಚ್ಚಿನ ಮತಗಳ ಮೂಲಕ ಆಯ್ಕೆ ಮಾಡಬೇಕು ಎಂದು ಕೋರಿದ್ದಾರೆ.

    ಪ್ರಸ್ತುತ ಚುನಾವಣೆಯಲ್ಲಿ ಬಾಗಲಕೋಟೆ ಪಿಕೆಪಿಎಸ್‌ನಿಂದ ಅಜಯಕುಮಾರ ಸರನಾಯಕ, ಟಿಎಪಿಸಿಎಂಎಸ್‌ನಿಂದ ನಂದಕುಮಾರ ಪಾಟೀಲ ಅವಿರೋಧ ಆಯ್ಕೆಯಾಗಿದ್ದಾರೆ. ಇವರಿಬ್ಬರೂ ನಮ್ಮ ಪಕ್ಷದ ಪ್ರಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಡಿಸಿಸಿ ಬ್ಯಾಂಕ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಆಡಳಿತವಿದ್ದು, ಅಧ್ಯಕ್ಷರಾಗಿ ಮಾಜಿ ಸಚಿವ ಅಜಯಕುಮಾರ ಸರನಾಯಕ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಉದಪುಡಿ ಅವರನ್ನು ಒಳಗೊಂಡ ನಮ್ಮ ಪಕ್ಷದ ಆಡಳಿತ ಮಂಡಳಿ ಜಿಲ್ಲೆಯ ರೈತರ, ಸಹಕಾರ ಸಂಘಗಳ ಅಭಿವೃದ್ಧಿಗಾಗಿ ಕೆಲಸ ಮಾಡಿದೆ.
    ಸಿದ್ದರಾಮಯ್ಯವಿಪಕ್ಷ ನಾಯಕ, ಬಾದಾಮಿ ಶಾಸಕ



    ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts