More

    ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ

    ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಬಿಜೆಪಿ ಪಕ್ಷವು ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಮತದಾರರು ಬೆಂಬಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದರು.

    ಒಟ್ಟು 13 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಎಲ್ಲ ಕುರಿ ಉಣ್ಣೆ ಉತ್ಪಾದಕರ ನೇಕಾರ ಸಹಕಾರ ಸಂಘಗಳ ಮತಕ್ಷೇತ್ರಕ್ಕೆ ಸದಾಶಿವ ಕಲ್ಲಪ್ಪ ಇಟಕನ್ನವರ, ಎಲ್ಲ ಪಟ್ಟಣ ಬ್ಯಾಂಕುಗಳು ಮತ್ತು ಬಿನ್ ಶೇತ್ಕಿ ಸಹಕಾರ ಸಂಘಗಳ ಮತಕ್ಷೇತ್ರಕ್ಕೆ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಇತರೆ ಸಹಕಾರಿ ಸಂಘಗಳ ಮತಕ್ಷೇತ್ರಕ್ಕಷೆ ವಿ.ಪ ಸದಸ್ಯ ಹನುಮಂತ ರುದ್ರಪ್ಪ ನಿರಾಣಿ, ಮುಧೋಳ ಪಿಕೆಪಿಎಸ್‌ಗೆ ರಾಮಪ್ಪ ಸಿದ್ದಪ್ಪ ತಳೇವಾಡ, ಬೀಳಗಿ ಪಿಕೆಪಿಎಸ್ ಈರಣ್ಣ ಯಮನಪ್ಪ ಗಿಡಪ್ಪಗೋಳ, ಜಮಖಂಡಿ ಪಿಕೆಪಿಎಸ್‌ಗೆ ಯೋಗಪ್ಪ ಸವದಿ, ಇಳಕಲ್ಲ ಪಿಕೆಪಿಎಸ್‌ಗೆ ಶಿವನಗೌಡ ಶರಣಪ್ಪಗೌಡ ಅಗಸಿಮುಂದಿನ( ಬಿಜೆಪಿ), ಹುನಗುಂದ ಪಿಕೆಪಿಎಸ್‌ಗೆ ಜಿ.ಪಂ ಸದಸ್ಯ ವಿರೇಶ ಉಂಡೋಡಿ, ಎಲ್ಲ ನೇಕಾರ ಸಹಕಾರ ಸಂಘಗಳ ಮತಕ್ಷೇತ್ರಕ್ಕೆ ಮಲ್ಲಿಕಾರ್ಜುನ ಬಣಾಕಾರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಮತದಾರರು ಅವರಿಗೆ ಮತ ನೀಡಬೇಕು ಎಂದು ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

    ಎರಡು ಕ್ಷೇತ್ರಗಳಲ್ಲಿ ಗೊಂದಲ ಇಲ್ಲ…
    ರಬಕವಿ ಬನಹಟ್ಟಿ ಪಿಕೆಪಿಎಸ್ ಕ್ಷೇತ್ರಕ್ಕೆ ಶಾಸಕ ಸಿದ್ದು ಸವದಿ ಬಾದಾಮಿ ಪಿಕಿಪಿಎಸ್‌ಗೆ ಹನುಮಂತಗೌಡ ಗೌಡ್ರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಕೋರ್ ಕಮಿಟಿಯಲ್ಲಿ ಎಲ್ಲರ ಹೆಸರು ಅಂತಿಮಗೊಳಿಸಲಾಗಿದೆ. ಈ ವಿಷಯದಲ್ಲಿ ಗೊಂದಲವಿಲ್ಲ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಭೀಮಸಿ ಮಗದುಮ(ರಬಕವಿ-ಬನಹಟ್ಟಿ ಪಿಕೆಪಿಎಸ್), ಕುಮಾರಗೌಡ ಜನಾಲಿ(ಬಾದಾಮಿ ಪಿಕೆಪಿಎಸ್) ಅವರ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆದಿದೆ. ರಾಜ್ಯ ಘಟಕಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಬಿಜೆಪಿ ಪಕ್ಷದ ಮುಖಂಡರಾದ ರಾಜು ನಾಯ್ಕರ, ಜಯಂತ ಕುರಂದವಾಡ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಡಿಸಿಸಿ ಬ್ಯಾಂಕ್ ಚುನಾವಣೆಗೆ ಶಾಸಕರು, ಅವರ ಕುಟುಂಬದ ಸದಸ್ಯರು ಸ್ಪರ್ಧೆ ಮಾಡಿರುವದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಕಾರ್ಯಕರ್ತರು, ಮುಖಂಡರು ಒತ್ತಾಯ ಮೇರೆಗೆ ಸ್ಪರ್ಧೆ ಮಾಡಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಮತದಾರರು ಬೆಂಬಲಿಸಬೇಕು.
    – ವೀರಣ್ಣ ಚರಂತಿಮಠ ಶಾಸಕ ಬಾಗಲಕೋಟೆ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts