More

    ಅನುದಾನ ಬಳಕೆಗೆ ಸೂಕ್ತ ಕ್ರಮ

    ಬಾಗಲಕೋಟೆ: ಅಂಗವಿಕಲರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹರಿಸಲು ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಗವಿಕಲರ ವಿವಿಧ ಬೇಡಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಮಾಸಾಶನದಲ್ಲಿರುವ ತೊಂದರೆಗಳನ್ನು ಸರಿಪಡಿಸಲಾಗಿದ್ದು, ಇನ್ನು ಕೆಲವು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವುದರಿಂದ ಮಾಸಾಶನ ಜಮೆಯಾಗುತ್ತಿಲ್ಲ. ಅಂಗವಿಕಲರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಲಾಗುವುದು. ಇನ್ನು ಮುಂದೆ ತಾಲೂಕು ಮಟ್ಟದಲ್ಲಿಯೇ ಕುಂದು ಕೊರತೆ ಸರಿಪಡಿಸಲು ಕ್ರಮ ವಹಿಸಲಾಗುವುದು. ಈ ಕುರಿತು ಸಭೆ ನಡೆದ ಬಗ್ಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗೆ ವರದಿ ನೀಡಲು ತಿಳಿಸಿದರು.

    ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ 691 ಅಂಗವಿಕಲ ಲಾನುಭವಿಗಳಿಗೆ ಮಾಸಾಶನ ಸ್ಥಗಿತಗೊಂಡಿತ್ತು. ಅವುಗಳಲ್ಲಿ 377 ಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದೆ. 160 ಲಾನುಭವಿಗಳು ಮರಣ ಹೊಂದಿದ್ದು, 80 ಲಾನುಭವಿಗಳು ಸ್ಥಳಾಂತರಗೊಂಡರೆ ಇಬ್ಬರು ಸರ್ಕಾರಿ ನೌಕರರಾಗಿದ್ದಾರೆ. ಓರ್ವ ಲಾನುಭವಿಯನ್ನು ರದ್ದುಪಡಿಸಲಾಗಿದೆ. ಇನ್ನು 71 ಜನರ ಬಾಕಿ ಇದ್ದು, ಶೀಘ್ರದಲ್ಲಿಯೇ ಮಾಸಾಶನ ದೊರೆಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಅಂಗವಿಕಲರಿಗೆ ವಿಶೇಷ ಗುರುತಿನ ಚೀಟಿ ನೀಡುವ ಯುಡಿಐಡಿ ಕಾರ್ಡ್‌ಗಾಗಿ ಜಿಲ್ಲೆಯಲ್ಲಿ 24336 ಜನ ಅಂಗವಿಕಲರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 17 ಸಾವಿರದಷ್ಟು ಯುಡಿಐಡಿ ಕಾರ್ಡ್ ನೀಡಲು ಬಾಕಿ ಉಳಿದಿದೆ. ಇದಕ್ಕೆ ಆರೋಗ್ಯ ಇಲಾಖೆಯ ನಿರ್ಲಕ್ಷೃ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾಸ್ಪತ್ರೆ ಹಾಗೂ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಅವರಿಗೆ ಸೂಚನೆ ನೀಡಿದರು. ಶ್ರವಣದೋಷ ಮತ್ತು ವಾಕ್ ದೋಷವುಳ್ಳ ಅಂಗವಿಕಲರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಆಡಿಯೋಗ್ರಾಮ್ ಮತ್ತು ಬಿರಾ ಟೆಸ್ಟ್ ಮಾಡಲು ತಿಳಿಸಿದರು.

    ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಕೆ.ಬಸಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಇದ್ದರು.

    ಅನುದಾನ ಕಡ್ಡಾಯವಾಗಿ ಬಳಕೆ ಮಾಡಿ
    ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳು ಅಂಗವಿಕಲರಿಗೆ ಮೀಸಲಿರಿಸಲಾದ ಶೇ.5 ರಷ್ಟು ಅನುದಾನವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಅಲ್ಲದೆ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಹ ಅಂಗವಿಕಲರಿಗೆ ಶೇ.5ರ ಅನುದಾನ ಬಳಕೆ ಕುರಿತು ಗಮನಕ್ಕೆ ತರಲಾಗುವುದು. ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

    ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಮೂರು ಕಡೆ ಲಿಫ್ಟ್ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಾರ್ಯಾಲಯ, ವಿವಿಧ ಇಲಾಖೆಯ ತಾಲೂಕು ಕಚೇರಿ ಹಾಗೂ ಪೊಲೀಸ್ ಠಾಣೆಗಳಲ್ಲಿಯೂ ರ‌್ಯಾಂಪ್ ವ್ಯವಸ್ಥೆ ಕಲ್ಪಿಸಲಾಗುವುದು.
    ಕೆ.ರಾಜೇಂದ್ರ, ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts