More

    ಸುನಗ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಿದ ಬಾಗಲಕೋಟೆ ಜಿಲ್ಲಾಧಿಕಾರಿ, ಅಧಿಕಾರಿಗಳು


    ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆ, ಬೆಳೆಗಳು ಹಾನಿಗೊಳಗಾಗಿದ್ದು, ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮತ್ತು ಜಿಪಂ ಸಿಇಒ ಟಿ. ಭೂಬಾಲನ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಬೀಳಗಿ ತಾಲೂಕಿನ ಸುನಗ ಗ್ರಾಮದ ಬಳಿಯ ಜಮೀನಿನಲ್ಲಿ ಈರುಳ್ಳಿ ಬೆಳೆ ನೀರಿನಲ್ಲಿ ನಿಂತಿದ್ದನ್ನು, ಕಟಾವು ಮಾಡಿದ ಫಸಲು ಹಾಳಾಗಿರುವುದನ್ನು ವೀಕ್ಷಿಸಿದರು.

    ಸಿದ್ದಾಪುರ ಮತ್ತು ಮಂಟೂರ ಗ್ರಾಮಗಳಲ್ಲಿ ಮೆಕ್ಕೆಜೋಳ ಬೆಳೆ ಹಾನಿಯಾಗಿರುವುದನ್ನು ಪರಿಶೀಲಿಸಿ ಅಂದಾಜು ಹಾನಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರೈತರ ಜೊತೆ ಮಾತನಾಡಿ ಸರ್ಕಾರದಿಂದ ಹಾನಿಗೆ ಸೂಕ್ತ ಪರಿಹಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

    ಜಮಖಂಡಿ ಉಪ ವಿಭಾಗಾಧಿಕಾರಿ ಸಿದ್ದು ಹುಲ್ಲೋಳಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ ಕುಮಾರ ಬಾವಿದಡ್ಡಿ, ಕೃಷಿ ಇಲಾಖೆ ಉಪನಿರ್ದೇಶಕ ಕೆ.ಎಸ್. ಅಗಸನಾಳ, ಕೃಷಿ ಸಹಾಯಕ ನಿರ್ದೇಶಕ ಸತೀಶ ಮಾವನಕೊಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts