25.9 C
Bengaluru
Wednesday, January 22, 2020

ಟನ್ ಮರಳಿಗೆ 645 ರೂ. ದರ ನಿಗದಿ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರತಿ ಮೆ.ಟನ್ ಮರಳಿಗೆ 645 ರೂ. ದರ ನಿಗದಿಪಡಿಸಲಾಗಿದ್ದು, ಈ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಟಾಸ್ಕ್​ಫೋಸ್​ ಸಮಿತಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಮತ್ತು ಜಿಲ್ಲಾ ಮರಳು ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಿಂದೆ ಒಂದು ಮೆಟ್ರಿಕ್ ಟನ್‌ಗೆ 480 ರೂ.ದರದಲ್ಲಿ ಮಾರಾಟ ಮಾಡಲು ದರ ನಿಗದಿಯಾಗಿತ್ತು. ಪ್ರಸ್ತುತ ಗುತ್ತಿಗೆದಾರರು ಮಾರುಕಟ್ಟೆಯಲ್ಲಿ ಎಲ್ಲ ವಸ್ತುಗಳ ದರಗಳು ಹೆಚ್ಚಾಗಿರುವುದರಿಂದ ಮರಳಿನ ಬೆಲೆ ಹೆಚ್ಚಿಸುವಂತೆ ಮನವಿ ಸಲ್ಲಿಸಿದ ಹಿನ್ನೆಲೆ ದರ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ದರ ಪರಿಷ್ಕರಣೆ ಬಗ್ಗೆ ಪಕ್ಕದ ಜಿಲ್ಲೆಗಳಾದ ಗದಗ, ಚಿತ್ರದುರ್ಗ ಜಿಲ್ಲೆ ಬಗ್ಗೆ ಚರ್ಚೆ ವೇಳೆ ಒಂದು ಮೆ.ಟನ್‌ಗೆ 900 ರಿಂದ 950 ರೂ. ಮಾರಾಟ ದರ ನಿಗದಿಪಡಿಸಿರುವುದು ತಿಳಿದು ಬಂತು. ಜಿಲ್ಲೆಯ ಜನರಿಗೆ ಮರಳು ಬೆಲೆ ಭಾರವಾಗದಂತೆ ದರ ನಿಗದಿಪಡಿಸಲಾಗಿದೆ. ಸರ್ಕಾರದ ಎಸ್‌ಆರ್ ದರ ಪ್ರತಿ ಮೆ.ಟನ್‌ಗೆ 970 ರೂ. ಇದ್ದು ಅದಕ್ಕಿಂತ ಕಡಿಮೆ ದರ ನಿಗದಿಪಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆ ಅನುಮತಿ ಕೋರಿ ಬಾದಾಮಿ ತಾಲೂಕಿನಿಂದ 11 ಹಾಗೂ ಹುನಗುಂದ ತಾಲೂಕಿನಿಂದ 1 ಅರ್ಜಿ ಬಂದಿವೆ. ಸ್ಥಳ ಪರಿಶೀಲಿಸಿ ಮರಳು ಲಭ್ಯತೆಯ ಬಗ್ಗೆ ಮಾದರಿ ಸಂಗ್ರಹಿಸಿ ಗುಣಮಟ್ಟ ಪರೀಕ್ಷಿಸಿ ಕಟ್ಟಡ ಕಾಮಗಾರಿಗಳಿಗೆ ಯೋಗ್ಯವಿರುವ ಬಗ್ಗೆ ಮಾಹಿತಿ ನೀಡಿದ ನಂತರ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಈಗಾಗಲೇ 16 ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದರು.

ಜಮಖಂಡಿ ತಾಲೂಕಿನ ತಮದಡ್ಡಿ ಗ್ರಾಮದ ಕೃಷ್ಣಾ ನದಿ ಪಾತ್ರದ 5 ಬ್ಲಾಕ್‌ಗಳಿಂದ 121.410 ಕ್ಯೂ.ಮೀ. ಮರಳು ಲಭ್ಯವಿದ್ದು, ಇ-ಟೆಂಡರ್ ಮೂಲಕ ವಿಲೇ ಮಾಡಲು ಟೆಂಡರ್ ಕರೆಯಲಾಗಿದೆ. ಟೆಂಡರದಾರರು 2829 ರೂ.ಗೆ ಬಿಡ್ ಮಾಡಿದ್ದಾರೆ. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗಿರುವುದರಿಂದ ಈ ಟೆಂಡರ್ ತಿರಸ್ಕರಿಸಾಗುವುದು. ಈಗಿರುವ ಟೆಂಡರ್ 2 ವರ್ಷ ವಿಳಂಬವಾಗಿದ್ದರಿಂದ ಶಾರ್ಟ್‌ಟರ್ಮ್ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಪಿಂಕ್ ಗ್ರಾನೈಟ್ ಗುತ್ತಿಗೆ ಕೋರಿ ಮಂಜೂರು, ನವೀಕರಣ ಲೈಸೆನ್ಸ್‌ಗಾಗಿ 5 ಅರ್ಜಿಗಳು ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿ ವರದಿ ಸಲ್ಲಿಸಬೇಕು ಎಂದು ಅಕಾರಿಗಳಿಗೆ ಸೂಚಿಸಿದರು. ಪಟ್ಟಾ ಜಮೀನುಗಳಲ್ಲಿ ಎಂ-ಸ್ಯಾಂಡ್ ಉತ್ಪಾದಿಸಲು ಕಲ್ಲು ಗಣಿ ಗುತ್ತಿಗೆಗೆ ಮಂಜೂರು, ಲೈಸೆನ್ಸ್ ಕೋರಿ ಬಂದ ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಜೆಲ್ಲಿ ಕಲ್ಲು ಕ್ರಷರ್ ಘಟಕ ಸ್ಥಾಪಿಸಲು ಲೈಸೆನ್ಸ್‌ಗಾಗಿ ಫಾರ್ಮ್ ಬಿ 1 ಕೋರಿ 7 ಅರ್ಜಿ ಬಂದಿದ್ದು, ಮತ್ತೊಮ್ಮೆ ಪರಿಶೀಲನೆ ಮಾಡಿದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಕಾರಿ ರಾಮಚಂದ್ರನ್ ಹೇಳಿದರು.

ಅಕ್ರಮ ಮರಳು ಸಾಗಣೆ ತಡೆಯುವ ನಿಟ್ಟಿನಲ್ಲಿ ವಾಹನಗಳಿಗೆ ಜಿಪಿಎಸ್ ಅಳವಡಿಸುವ ಮೂಲಕ ಟ್ರಾಕಿಂಗ್ ಮಾಡುವ ಕುರಿತು ರಾನೆ ಟೆಲಿಮ್ಯಾಟ್ ಕಂಪನಿಯವರು ಪಿಪಿಟಿ ಮೂಲಕ ಸವಿವರವಾಗಿ ಸಭೆಯಲ್ಲಿ ಮಂಡಿಸಿದರು. ಈ ಜಿಪಿಎಸ್ ಟ್ರಾಕಿಂಗ್ ವ್ಯವಸ್ಥೆ ಅಳವಡಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಜಿಲ್ಲಾಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಉಪವಿಭಾಗಾಧಿಕಾರಿಗಳಾದ ಎಚ್.ಜಯಾ, ಮಹಮ್ಮದ್ ಇಕ್ರಮ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಅಕಾರಿ ಮನಿಯಾರ, ಲೋಕೋಪಯೋಗಿ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...