More

    ಚುನಾವಣೆ ಎದುರಿಸಲು ಸಜ್ಜಾಗಿ

    ಬಾಗಲಕೋಟೆ: ಮುಂದಿನ ಕೆಲವೇ ತಿಂಗಳುಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಚುನಾವಣೆ ಎದುರಿಸಲು ಸಜ್ಜಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

    ನಗರದ ಬಿವಿವಿ ಸಂಘದ ಆವರಣದಲ್ಲಿರುವ ವೀರಭದ್ರೇಶ್ವರ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

    ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದ ಫಲವಾಗಿ ಬಿಜೆಪಿ ಪಕ್ಷ ಅಧಿಕ ಸ್ಥಾನ ಗೆಲ್ಲಲು ಸಾಧ್ಯವಾಯಿತು. ಶೇ.80 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಕ್ಕೆ ಬರಲು ಯಶಸ್ವಿಯಾಯಿತು. ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಇದೇ ರೀತಿ ಬಿಜೆಪಿ ವಿಜಯದ ನಗೆ ಬೀರಲು ಒತ್ತು ನೀಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಮಾತನಾಡಿ, ಪಕ್ಷದ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು. ಬೂತ್‌ಮಟ್ಟದಿಂದ ಸಂಘಟಿಸಬೇಕು. ಕಾರ್ಯಕರ್ತರು ಸಾಥ್ ನೀಡಿದಾಗ ಮಾತ್ರ ಪ್ರತಿಯೊಂದು ಕಾರ್ಯ ಯಶಸ್ವಿಯಾಗುತ್ತದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ನಿರಂತರವಾಗಿ ನಡೆಯುತ್ತಿದೆ. ಮುಂದಿನ ಎಲ್ಲ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

    ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಶಾಸಕ ವೀರಣ್ಣ ಚರಂತಿಮಠ, ಮಾಜಿ ಶಾಸಕರಾದ ಪಿ.ಎಚ್.ಪೂಜಾರ, ರಾಜಶೇಖರ ಶೀಲವಂತ, ಎಂ.ಕೆ.ಪಟ್ಟಣಶೆಟ್ಟಿ, ಮುಖಂಡರಾದ ಪ್ರಕಾಶ ಅಕ್ಕಲಕೋಟ, ಚಂದ್ರಶೇಖರ ಕೌಟಗಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ ಉಪಸ್ಥಿತರಿದ್ದರು.



    ಚುನಾವಣೆ ಎದುರಿಸಲು ಸಜ್ಜಾಗಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts