20.4 C
Bengaluru
Sunday, January 19, 2020

ಡಿಎಆರ್ ತಂಡಕ್ಕೆ ಚಾಂಪಿಯನ್ ಪಟ್ಟ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬಾಗಲಕೋಟೆ: ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಬಾಗಲಕೋಟೆ ಡಿಎಆರ್ ವಿಭಾಗದ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಪುರುಷರ ವಿಭಾಗದಲ್ಲಿ ಡಿಎಆರ್ ಸಿಬ್ಬಂದಿ ರಾಜು ದಾಸರ, ಮಹಿಳೆಯರ ವಿಭಾಗದಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯ ಆರ್.ಎಸ್. ಪಾಟೀಲ ವೈಯಕ್ತಿಕ ಚಾಂಪಿಯನ್‌ಗೆ ಭಾಜನರಾದರು.

ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಬೆಳಗಾವಿ ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಮಾನಸಿಕ, ದೈಹಿಕ ಒತ್ತಡಗಳು ನಿರಂತವಾಗಿ ಇರುತ್ತವೆ. ಹೀಗಾಗಿ ಸಿಬ್ಬಂದಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು. ಚಲನಚಿತ್ರ ವೀಕ್ಷಣೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಒತ್ತಡ ನಿವಾರಣೆಯಾಗುತ್ತದೆ ಎಂದರು.

ಪೊಲೀಸ್ ಇಲಾಖೆಯಲ್ಲಿ ಜೀವನದ ಎಲ್ಲ ಏರಿಳಿತವನ್ನು ಕಾಣುತ್ತೇವೆ. ಸಮಸ್ಯೆ, ನೋವು, ಸಂಕಷ್ಟ, ನಲಿವು ಎಲ್ಲವನ್ನು ಈ ಇಲಾಖೆ ಕಲಿಸುತ್ತದೆ. ಎಲ್ಲವನ್ನು ಸಮಚಿತ್ತ ಭಾವದಿಂದ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ಜೀವನ ಪ್ರತಿಕ್ಷಣ ಆನಂದದಿಂದ ಅನುಭವಿಸಬೇಕು. ಇಲಾಖೆ ಸಿಬ್ಬಂದಿಗೆ ಕೌನ್ಸೆಲಿಂಗ್ ಮೂಲಕ ಕೇಳಿದ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಉತ್ತಮವಾಗಿ ಸೇವೆ ಸಲ್ಲಿಸಿ ಹೆಸರು ಪಡೆಯಬೇಕು. ಜನರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಬಾಗಲಕೋಟೆ ಡಿವೈಎಸ್‌ಪಿ ಚಂದ್ರಕಾಂತ ನಂದರಡ್ಡಿ, ಜಮಖಂಡಿ ಡಿವೈಎಸ್‌ಪಿ ಆರ್.ಕೆ. ಪಾಟೀಲ, ಡಿಸಿಆರ್‌ಬಿ ಡಿವೈಎಸ್‌ಪಿ ರವೀಂದ್ರ ಶಿರೂರ, ಸಿಪಿಐಗಳಾದ ಐ.ಆರ್. ಪಟ್ಟಣಶೆಟ್ಟಿ, ಕರುಣೇಶ ಗೌಡ ಇತರರು ಇದ್ದರು.

ಶೂಟಿಂಗ್‌ನಲ್ಲಿ ಎಸ್ಪಿ ಪ್ರಥಮ
ಜಿಲ್ಲಾ ಪೊಲೀಸ್ ಕ್ರೀಡಾಕೂಟದ 9 ಎಂ.ಎಂ. ಪಿಸ್ತೂಲ್ ಶೂಟಿಂಗ್ ಅಧಿಕಾರಿಗಳ ವಿಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಪ್ರಥಮ, ಬಾಗಲಕೋಟೆ ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ ದ್ವಿತೀಯ, ಡಿಸಿಆರ್‌ಇ ಡಿವೈಎಸ್‌ಪಿ ಸುರೇಶ ರೆಡ್ಡಿ ತೃತೀಯ ಸ್ಥಾನ ಪಡೆದರು.

ಪುರುಷರ 100 ಮೀಟರ್ ಓಟದಲ್ಲಿ ರಾಜು ದಾಸರ (ಪ್ರಥಮ), ಪಿ.ಎಸ್.ಲಮಾಣಿ (ದ್ವಿತೀಯ), ವೈ.ಎಂ.ವಡ್ಡರ (ತೃತೀಯ) ಸ್ಥಾನ ಪಡೆದರು. ಗ್ರೂಪ್ ಇವೆಂಟ್ಸ್‌ನ ಪುರುಷರ ವಿಭಾದಲ್ಲಿ 4*400 ಮೀಟರ್ ರಿಲೇ ಓಟದಲ್ಲಿ ಡಿಎಆರ್ ಬಾಗಲಕೋಟೆ (ಪ್ರಥಮ), ಬಾಗಲಕೋಟೆ ಶಹರ (ದ್ವಿತೀಯ), ಹುನಗುಂದ ವೃತ್ತ (ತೃತೀಯ), 4* 100 ಮೀಟರ್ ಓಟದಲ್ಲಿ ಬಾಗಲಕೋಟೆ ಡಿಎಆರ್ (ಪ್ರಥಮ), ಹುನಗುಂದ (ದ್ವಿತೀಯ), ಟಗ್ ಆಫ್ ವಾರ್ ವಿಭಾಗದಲ್ಲಿ ಡಿಎಆರ್ ಬಾಗಲಕೋಟೆ ಪ್ರಥಮ, ಮುಧೋಳ ವೃತ್ತ ದ್ವಿತೀಯ, ವಾಲಿಬಾಲ್ ಪಂದ್ಯಾವಳಿಯಲ್ಲಿ ಡಿಎಆರ್ ಬಾಗಲಕೋಟೆ ಪ್ರಥಮ, ಬಾಗಲಕೋಟೆ ನಗರ ಹಾಗೂ ಗ್ರಾಮೀಣ ದ್ವಿತೀಯ, ಕಬಡ್ಡಿ ಪಂದ್ಯಾವಳಿಯಲ್ಲಿ ಬಾದಾಮಿ ಪ್ರಥಮ, ಹುನಗುಂದ ವೃತ್ತ ದ್ವಿತೀಯ ಸ್ಥಾನ, ಕ್ರಿಕೆಟ್‌ನಲ್ಲಿ ಬಾಗಲಕೋಟೆ ಪ್ರೆಸ್‌ತಂಡ್ ಪ್ರಥಮ ಸ್ಥಾನ ಪಡೆಯಿತು.

ಬ್ಯಾಡ್ಮಿಂಟನ್‌ನಲ್ಲಿ ಭರತ ಪ್ರಥಮ
ಪೊಲೀಸ್ ಅಧಿಕಾರಿಗಳ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಭರತ ತಳವಾರ ಪ್ರಥಮ, ಆರ್.ಕೆ. ಪಾಟೀಲ ದ್ವಿತೀಯ, ಡಬಲ್ಸ್ ವಿಭಾಗದಲ್ಲಿ ಭರತ ತಳವಾರ, ಚಂದ್ರಕಾಂತ ನಂದರೆಡ್ಡಿ ಜೋಡಿ ಪ್ರಥಮ ಹಾಗೂ ಆರ್.ಕೆ. ಪಾಟೀಲ, ರವೀಂದ್ರ ಶಿರೂರ ಜೋಡಿ ದ್ವಿತೀಯ ಸ್ಥಾನ ಪಡೆಯಿತು. ಇನ್ನು ಮಹಿಳಾ ವಿಭಾಗ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಶೋಭಾ ಕೆ.ಟಿ. ಪ್ರಥಮ, ಎಸ್.ಎಸ್. ತೇಲಿ ದ್ವಿತೀಯ ಸ್ಥಾನ ಪಡೆದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...