More

    ಒತ್ತಡ ಮುಕ್ತ ಜೀವನಕ್ಕೆ ಕ್ರೀಡೆ ಸಹಕಾರಿ

    ಬಾಗಲಕೋಟೆ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವನಗರದ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿರುವ 2020ನೇ ಸಾಲಿನ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ದೊರೆಯಿತು. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾಕೂಟಕ್ಕೆ ಮೆರುಗು ತಂದರು.

    ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಮಾತನಾಡಿ, ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗಳ ಪಾತ್ರ ಬಹುಮುಖ್ಯವಾಗಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸ್ ಇಲಾಖೆ ಶಿಸ್ತಿಗೆ ಹೆಸರಾಗಿದೆ. ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಪರ್ಧಾ ಮನೋಭಾವನೆಯಿಂದ ಎಲ್ಲರೂ ಭಾಗವಹಿಸಬೇಕು. ದೈನಂದಿನ ಕಾರ್ಯ ಚಟುವಟಿಕೆಯ ಒತ್ತಡದಿಂದ ಹೊರ ಬರಲು ಕ್ರೀಡೆಗಳು ಸಹಕಾರಿಯಾಗಿವೆ ಎಂದರು.

    ಜಿಲ್ಲಾ ಪಂಚಾಯಿತಿ ಸಿಇಒ ಟಿ.ಭೂಬಾಲನ್ ಮಾತನಾಡಿ, ದೇಶ, ಸಮಾಜದ ಸ್ವಾಸ್ಥೃ, ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಹಿರಿದು. ವಾರ್ಷಿಕ ಕ್ರೀಡಾಕೂಟದಿಂದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದ ಬಾಂಧವ್ಯ ವೃದ್ಧಿಯಾಗುತ್ತದೆ. ಪ್ರತಿಯೊಬ್ಬರಲ್ಲಿಯೂ ವಿಶೇಷ ಪ್ರತಿಭೆ, ಶಕ್ತಿ ಇರುತ್ತದೆ. ಪ್ರತಿಭೆ ಅನಾವರಣಗೊಳಿಸಲು ಕ್ರೀಡಾಕೂಟ ಉತ್ತಮ ವೇದಿಕೆಯಾಗಿದೆ. ಜೀವನದಲ್ಲಿ ಸಂತೋಷ, ನೆಮ್ಮದಿ ಕಾಣಲು ಯಾವುದಾದರೂ ಕ್ರೀಡಾಕೂಟ ರೂಢಿಸಿಕೊಳ್ಳಬೇಕು. ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಿ ಬಾಗಲಕೋಟೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಡಿಸಿಆರ್‌ಬಿ ಡಿವೈಎಸ್‌ಪಿ ರವೀಂದ್ರ ಶಿರೂರ ಉಪಸ್ಥಿತರಿದ್ದರು.



    ಒತ್ತಡ ಮುಕ್ತ ಜೀವನಕ್ಕೆ ಕ್ರೀಡೆ ಸಹಕಾರಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts