ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ

ಬಾಗಲಕೋಟೆ: ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿ ಉದ್ಯೋಗ ಸೃಷ್ಟಿ, ಕೃಷಿ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಬರ, ಕುಡಿಯುವ ನೀರು, ಕೃಷಿ, ನಗರಾಭಿವೃದ್ಧಿ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿಲ್ಲದೆ ಸಮಸ್ಯೆ ತಲೆದೋರಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಅಧಿಕಾರಿಗಳು ಕುಡಿಯುವ ನೀರು ಸರಬರಾಜಿಗೆ ಯಾವುದೇ ತೊಂದರೆಯಾಗದಂತೆ ಇಂದಿನಿಂದಲೇ ಮುಂಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ರೈತ ಸಂಘದವರ ಜತೆ ಚರ್ಚಿಸುವಂತೆ ತಿಳಿಸಿದರು.

ತಾಲೂಕು ಟಾಸ್ಕ್‌ಫೋರ್ಸ್ ಟಿಟಿಎ್ 1*2 ಸಿಆರ್‌ಎ್ ಹಾಗೂ 14ನೇ ಹಣಕಾಸು ಸೇರಿ ಒಟ್ಟು 9.54 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಒಟ್ಟು 362 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಉಳಿದ ಬಾಕಿ ಅನುದಾನದಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಡಿ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, 362 ಕಾಮಗಾರಿಗಳ ಗುಣಮಟ್ಟ ಹಾಗೂ ಸ್ಥಿತಿಗತಿ ಪರಿಶೀಲಿಸಬೇಕು ಎಂದು ಉಪವಿಭಾಗ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ ಕೃಷಿ ಚಟುವಟಿಕೆ ತೀವ್ರಗೊಂಡಿದ್ದು ಮತ್ತು ತೃಪ್ತಿದಾಯಕ ಮಳೆಯಾಗಿದ್ದರಿಂದ ಜಾನುವಾರುಗಳಿಗೆ ಸದ್ಯ ಮೇವಿನ ಅಭಾವ ಇಲ್ಲ ಎಂದು ತಿಳಿಸಿದರು. ಪಶುಸಂಗೋಪನಾ ಇಲಾಖೆಯಿಂದ ಪ್ರತಿ ಬಾರಿ ಹೊರ ಜಿಲ್ಲೆಗಳಿಂದ ಮೇವು ತರಿಸಿಕೊಳ್ಳಲಾಗುತ್ತಿತ್ತು. ಇನ್ನು ಮುಂದೆ ಜಿಲ್ಲೆಯ ರೈತರಿಂದಲೂ ಮೇವು ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯದರ್ಶಿಗಳಿಗೆ ತಿಳಿಸಿದರು.

ಪ್ರಸಕ್ತ ಸಾಲಿನ ಸೆಪ್ಟೆಂಬರ್ ತಿಂಗಳಲ್ಲಿ ಮೇವು ಸಮೀಕ್ಷೆ ಕೈಗೊಳ್ಳಬೇಕು, ಜಿಲ್ಲೆಯ ಎಲ್ಲ ತಾಲೂಕಿನ ತಹಸೀಲ್ದಾರರು, ಕೃಷಿ ಅಧಿಕಾರಿಗಳು ಹೋಬಳಿವಾರು ಮೇವು ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಬೇಕು. ಸಾವಿರಾರು ರೈತರಿಗೆ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ರೈತರಿಂದ ಮೇವು ಖರೀದಿಸಬೇಕು. ದನಕರುಗಳಿಗಾಗಿ ನಿರ್ಮಿಸಿದ ನೀರಿನ ತೊಟ್ಟಿಗಳ ಸ್ಥಿತಿಗತಿಯನ್ನು ಪರಿಶೀಲಿಸಿ ರಿಪೇರಿ ಇದ್ದಲ್ಲಿ ನರೇಗಾ ಯೋಜನೆ ಅಡಿ ಸರಿಪಡಿಸುವಂತೆ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಗ್ರಾಮೀಣ ಹಾಗೂ ನಗರ ಕುಡಿಯುವ ನೀರು ಸರಬರಾಜಿಗೆ ಸಾಕಷ್ಟು ಅನುದಾನ ಲಭ್ಯವಿದ್ದು, ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಯಶಸ್ವಿಗೊಳಿಸಬೇಕು. ನದಿ ಪಾತ್ರದಲ್ಲಿರುವ ಯೋಜನೆಗಳಲ್ಲಿ ಸಮಸ್ಯೆಯಾಗದಂತೆ ಮಳೆಗಾಲದಲ್ಲಿಯೇ ನೀರು ಸಂಗ್ರಹ ಹಾಗೂ ಪಂಪ ಸ್ಥಿತಿಗತಿ ಪರಿಶೀಲಿಸಬೇಕು. ಬಹುಹಳ್ಳಿ ಕುಡಿಯುವ ನೀರಿನ ಯೊಜನೆಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ 36 ಬಹುಹಳ್ಳಿ ಯೋಜನೆ ಪೈಕಿ ನಾಗರಾಳ ಹಾಗೂ ಮೆಟಗುಡ್ಡ ಯೊಜನೆಗಳು ವಿಲವಾಗಿವೆ. ಎರಡು ಪ್ರಗತಿಯಲ್ಲಿದ್ದು, 32 ಯೋಜನೆಗಳು ಚಾಲ್ತಿಯಲ್ಲಿವೆ. ವಿಲ ಹಾಗೂ ಅಪೂರ್ಣ ಯೋಜನೆಗಳನ್ನು ಜಲ ಮಟ್ಟದ ಜಾಕ್‌ವೆಲ್ ಹಾಗೂ ಸರಬರಾಜು ಪ್ಲಾೃನ್‌ಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 79.50 ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಈ ಪೈಕಿ 30 ಕೋಟಿ ರೂ. ಬಹುಹಳ್ಳಿ ಯೊಜನೆ ಹಾಗೂ 9.90 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಸಮಸ್ಯಾತ್ಮಾಕ ಗ್ರಾಮಗಳಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರು ಪೂರೈಕೆಕಾಗಿ ಜಿಲ್ಲೆಯ 15 ಸ್ಥಳೀಯ ಸಂಸ್ಥೆಗಳಲ್ಲಿ 5.13 ಕೋಟಿ ರೂ.ವೆಚ್ಚದಲ್ಲಿ 162 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಅಧಿಕಾರಿ ಸಭೆಗೆ ತಿಳಿಸಿದರು. ಇನ್ನು ಐತಿಹಾಸಿಕ ಬಾದಾಮಿ ನಗರದಲ್ಲಿ ಕ್ರೀಡಾಂಗಣಕ್ಕೆ ಸ್ಥಳ ಗುರುತಿಸುವಂತೆ ಹಾಗೂ ಫುಟ್‌ಪಾತ್ ನವೀಕರಣಗೊಳಿಸುವಂತೆ ಕಾರ್ಯದರ್ಶಿಗಳು ಸೂಚಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಾಸ್ಟರ್ ಪ್ಲಾೃನ್, ಘನ ತ್ಯಾಜ್ಯ ವಸ್ತು ನಿರ್ವಹಣೆಗೆ ಹೆಚ್ಚು ಒತ್ತು ನೀಡುವಂತೆ ಸೂಚಿಸಲಾಯಿತು.

ನರೇಗಾ ಯೋಜನೆಯಡಿ ಕಾಮಗಾರಿ ಅನುಷ್ಠಾನದಲ್ಲಿ ಬಾಗಲಕೋಟೆ 5ನೇ ಸ್ಥಾನದಲ್ಲಿದ್ದು, ಉದ್ಯೋಗ ಖಾತ್ರಿಯಡಿ ಸುಸ್ಥಿರ ಕಾಮಗಾರಿಗಳನ್ನು ಕೈಗೊಂಡು ಚೆಕ್ ಡ್ಯಾಂ, ಬಂಡ್ ಹಾಗೂ ನೀರು ಸಂಗ್ರಹಣಾ ಕಾಮಗಾರಿಗಳ ಸ್ಥಿತಿಗತಿಯನ್ನು ಅಧಿಕಾರಿಗಳು ಆಗಾಗ ಪರಿಶೀಲಿಸುವಂತೆ ತುಷಾರ್ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *