22.5 C
Bengaluru
Sunday, January 19, 2020

ಅಧಿಕಾರಿಗಳು ರೈತರಿಗೆ ನೀರಾವರಿ ಅನುಕೂಲ ಕಲ್ಪಿಸಲಿ

Latest News

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು: ಐವರ ರಕ್ಷಣೆ, ಓರ್ವಳ ಸ್ಥಿತಿ ಗಂಭೀರ

ಮಂಗಳೂರು: ದೋಣಿ ದುರಂತದಲ್ಲಿ ಓರ್ವ ಯುವತಿ ನೀರುಪಾಲಾಗಿರುವ ಘಟನೆ ಭಾನುವಾರ ಸಂಜೆ ಉಳ್ಳಾಲ ಬಳಿಯ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಐವರು ಯುವತಿಯರನ್ನು ರಕ್ಷಿಸಲಾಗಿದ್ದು,...

ಹುನಗುಂದ: ಅಧಿಕಾರಿಗಳ ನಿರ್ಲಕ್ಷೃ ಹಾಗೂ ಕಂಪನಿ ಸಿಬ್ಬಂದಿಗೆ ಮಾಹಿತಿ ಇಲ್ಲದಿರುವುದರಿಂದ ಹನಿ ನೀರಾವರಿ ಯೋಜನೆ ರೈತರಿಗೆ ತಲುಪುತ್ತಿಲ್ಲ ಎಂದು ಶಾಸಕ ದೊಡ್ಡನಗೌಡ ಪಾಟೀಲ ವಿಷಾದ ವ್ಯಕ್ತಪಡಿಸಿದರು.

ಧನ್ನೂರ ರಸ್ತೆಯಲ್ಲಿರುವ ಹನಿ ನೀರಾವರಿ ಜಾಕ್‌ವೆಲ್‌ಗೆ ಭಾನುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಈ ಮಹತ್ವದ ಯೋಜನೆಯಿಂದ ರೈತರ ಬದುಕು ಹಸಿರಾಗಬೇಕಾಗಿದ್ದು, ನದಿಯಲ್ಲಿ ನೀರು ಇದ್ದಾಗಲೂ ಜಮೀನುಗಳಿಗೆ ನೀರುಣಿಸಲು ಮೀನಮೇಷ ಮಾಡುವುದನ್ನು ನಾನು ಸಹಿಸಲ್ಲ. ಕಳಪೆ ಸಾಮಗ್ರಿ ಸರಿಪಡಿಸಿ ಎಲ್ಲ ರೈತರಿಗೂ ಡ್ರಿಪ್ ಬಳಸುವಂತೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ನೀರು ಬರುತ್ತಿಲ್ಲವೆಂದು ಕೆಲವು ರೈತರು ಪೈಪ್ ಒಡೆದು ನೀರು ಪೋಲು ಮಾಡುತ್ತಿದ್ದಾರೆಂಬ ಆರೋಪಗಳಿಗೆ ಸಂಬಂಧಿಸಿ ಇಂಜಿನಿಯರ್ ಕ್ರಮ ತೆಗೆದುಕೊಂಡು ರೈತರ ಮನವೊಲಿಸಿ ಪೈಪ್ ಒಡೆಯ ದಂತೆ ತಿಳಿಸಬೇಕು. ಆಗಲೂ ಮಾತು ಕೇಳದ ರೈತರ ಮಾಹಿತಿಯನ್ನು ರೈತರಿಗೆ ತಿಳಿಸಿ ಕ್ರಮ ಜರುಗಿಸಬೇಕು. ಜಾಕ್‌ವೆಲ್‌ದಿಂದ ಹಿಡಿದು ಝೋನ್‌ವಾರು ಸಿಬ್ಬಂದಿ ಸ್ಥಳದಲ್ಲೇ ಇದ್ದು ಕಾರ್ಯ ನಿರ್ವಹಿಸಬೇಕು. ಬೇಜವಾಬ್ದಾರಿ ತೋರುವ ಸಿಬ್ಬಂದಿ ಬಗ್ಗೆ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಶಾಸಕರು ತಿಳಿಸಿದರು.

ಜಾಕ್‌ವೆಲ್‌ಗೆ ಬಳಸಿದ ಕಳಪೆ ಯಂತ್ರದಿಂದ ಜಮೀನುಗಳಿಗೆ ನೀರು ವೇಗವಾಗಿ ನೀರು ಹರಿಯುತ್ತಿಲ್ಲ. ಶೀಘ್ರ ತಾಂತ್ರಿಕ ಮುಖ್ಯಸ್ಥರ ಸಭೆ ಕರೆದು ಮಾಹಿತಿ ಪಡೆಯಲಾಗುವುದು ಎಂದರು.

ಮಾಹಿತಿ ಇಲ್ಲದೆ ಜಾಕ್‌ವೆಲ್‌ಗೆ ಬೀಗ ಹಾಕುವುದಾಗಲಿ ಅಥವಾ ಕಾರ್ಯನಿರ್ವಹಿಸುವ ಸಿಬ್ಬಂದಿ ದಬ್ಬಾಳಿಕೆಗೆ ಮುಂದಾದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇದು ನಮ್ಮ ಯೋಜನೆ ನಾವೆಲ್ಲರೂ ಜವಾಬ್ದಾರಿಯಿಂದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ರೈತರು ಮಾತನಾಡಿ, ಯೋಜನೆ ಬಂದಾಗಿನಿಂದ ಈತನಕ ನಮ್ಮ ಹೊಲ ಹನಿ ನೀರೂ ಕಂಡಿಲ್ಲವೆಂದು ಶಾಸಕರ ಮುಂದೆ ಅಳಲು ತೋಡಿಕೊಂಡರು. ರೈತ ಮುಖಂಡರು, ಇಇ ಸಾಂಬಾ, ವಸಂತ ಉಳ್ಳಿ, ತಿಪ್ಪೇಶಪ್ಪ ಇತರರು ಇದ್ದರು.

ಇಂದು ರೈತರ ಸಭೆ

ಹುನಗುಂದ: ಮರೋಳ ಏತ ನೀರಾವರಿ ಎರಡನೆ ಹಂತದ ಹನಿ ನೀರಾವರಿ ಬಳಸುವ ವಿಷಯವಾಗಿ ಚರ್ಚಿಸಲು ನ.26ರಂದು ಕುಂದು ಕೊರತೆ ಸಭೆ ಕರೆಯಲಾಗಿದೆ.ಶಾಸಕ ದೊಡ್ಡನಗೌಡ ಪಾಟೀಲ ನೇತೃತ್ವ ವಹಿಸಲಿದ್ದಾರೆ. ನೆಟಾಫಿನ್ ಕಂಪನಿ ಕಾರ್ಯನಿರ್ವಹಿಸುವ ರೆನ್ 1, 4 ಮತ್ತು 10ರ ರೈತರ ಸಭೆ ಬೆಳಗ್ಗೆ 10 ಗಂಟೆಗೆ ನಗರದ ಗುರುಭವನದಲ್ಲಿ, ಬನ್ನಿಹಟ್ಟಿ ಗ್ರಾಮದಲ್ಲಿ 11.30ಕ್ಕೆ 5,6ಮತ್ತು 7 ರೆನ್, ಸೂಳೇಭಾವಿ ಮಹಾಂತೇಶ ಮಠದಲ್ಲಿ ಮಧ್ಯಾಹ್ನ 1ಕ್ಕೆ 8,9,10 ಮತ್ತು 11, ಹುಲಗಿ ನಾಳ ಗ್ರಾಮದಲ್ಲಿ ಮಧ್ಯಾಹ್ನ 2.30ಕ್ಕೆ 19 ರಿಂದ 23 ರೆನ್ ವ್ಯಾಪ್ತಿಯ ರೈತರ ಸಭೆ ನಡೆಯಲಿದೆ ಎಂದು ಅಭಿಯಂತ ಎನ್.ಬಿ. ಸಾಂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...