More

    ಜಿಲ್ಲಾ ಮಟ್ಟದ ಉದ್ಯೋಗ ಮೇಳ ಯಶಸ್ವಿಗೊಳಿಸಿ

    ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜಿನಲ್ಲಿ ೆ.27 ಮತ್ತು 28 ರಂದು ಜರುಗಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮೇಳವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ನಿರ್ವಹಣೆಗಾಗಿ ರಚಿಸಲಾದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ಯೋಗ ಮೇಳದ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವ್ಯವಸ್ಥಾಪಕ ಸಮಿತಿಯನ್ನು ರಚಿಸಲಾಗಿದೆ. ಅದರಂತೆ ಹಣಕಾಸು ಸಮಿತಿ, ಮೂಲ ಸೌಕರ್ಯ, ಪ್ರಚಾರ, ಊಟ ಮತ್ತು ಉಪಹಾರ, ವಸತಿ, ಉದ್ಯೋಗ ಆಕಾಂಕ್ಷಿಗಳ, ನೋಂದಣಿ ಮತ್ತು ಮೇಲ್ವಿಚಾರಣೆ, ಸ್ಟಾಲ್ ನಿರ್ವಹಣೆ, ಸಾರಿಗೆ ಸಂಪರ್ಕ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ಸಮಿತಿಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದರು.

    ಉದ್ಯೋಗದಾತರ ಮತ್ತು ಉದ್ಯೋಗ ಆಕಾಂಕ್ಷಿಗಳ ಸಂಪರ್ಕ ಸಮಿತಿಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನೇತೃತ್ವದಲ್ಲಿ ರಚಿಸಲಾಗಿದ್ದು, ಜಿಲ್ಲೆಯ ಉದ್ಯೋಗದಾತರನ್ನು ಸಂಪರ್ಕಿಸಿ ಭಾಗವಹಿಸುವಂತೆ ಮಾಡಬೇಕು. ಅವರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ನೊಂದಣಿ ಮತ್ತು ಮೇಲ್ವಿಚಾರಣೆಗಾಗಿ ಜಿ.ಪಂ ಮುಖ್ಯ ಯೋಜನಾಧಿಕಾರಿಗಳ ನೇತೃತ್ವದ ಸಮಿತಿ ರಚಿಸಿದ್ದು, ಈ ಸಮಿತಿಯು ನೊಂದಾಯಿತ ಉದ್ಯೋಗದಾತರ ವಿವರವನ್ನು ಸಲ್ಲಿಸುವುದು, ನೊಂದಣಿ ಸ್ಟಾಲ್‌ಗಳಲ್ಲಿ ಅರ್ಜಿ ವಿತರಣೆ, ಮರ್ಗದರ್ಶನ ನೀಡುವ ಕೆಲಸವಾಗಬೇಕು ಎಂದರು.

    ಸ್ಟಾಲ್‌ಗಳ ವಿತರಣೆ ಮತ್ತು ನಿರ್ವಹಣೆ ಸಮಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಉದ್ಯೋಗದಾತರುಗಳಿಗೆ ಸ್ಟಾಲ್ ವ್ಯವಸ್ಥೆ, ಸ್ಟಾಲ್‌ಗಳಲ್ಲಿ ಎಲ್ಲ ರೀತಿಯ ಸೌಲಭ್ಯ ಪೂರೈಸುವ ಕೆಲಸವಾಗಬೇಕು. ಸಂದರ್ಶನ ನಡೆಸಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗ ಆಕಾಂಕ್ಷಿಗಳ ಗಣಕ ವಿಭಾಗ ಸಮಿತಿಗೆ ಎನ್.ಐ.ಸಿಯ ಜಿಲ್ಲಾ ಮಾಹಿತಿ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದ್ದು, ಉದ್ಯೋಗದಾತರಿಗೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಬಲ್ಕ್ ಎಸ್‌ಎಂಎಸ್ ಮತ್ತು ಮೇಲ್ ಕಳುಹಿಸುವುದು, ಆನ್‌ಲೈನ್, ಆಪ್‌ಲೈನ್ ನೊಂದಣಿಗೆ ಕ್ರಮವಹಿಸಬೇಕು ಎಂದು ತಿಳಿಸಿದರು.

    ಪ್ರತಿಯೊಂದು ಸಮಿತಿಯವರು ತಮ್ಮ ಹಂತದಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಿ ಯೋಜನೆ ರೂಪಿಸುವ ಮೂಲಕ ಉದ್ಯೋಗ ಮೇಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಗ್ರಾಮೀಣ ಭಾಗದ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಲು ಬಸ್‌ಗಳ ವ್ಯವಸ್ಥೆ ಮಾಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ತಿಳಿಸಿದರು.

    ಸಭೆಯಲ್ಲಿ ಪ್ರೊಬೆಷನರಿಗೆ ಐ.ಎ.ಎಸ್ ಅಧಿಕಾರಿ ಗರಿಮಾ ಪವ್ವಾರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ವಿ.ಎಸ್.ಹಿರೇಮಠ,ಎನ್.ಐ.ಸಿಯ ಜಿಲ್ಲಾ ಮಾಹಿತಿ ಅಧಿಕಾರಿ ಗಿರಿಯಾಚಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಅರುಣ ಗಾಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ನಗರಾಭಿವೃದ್ಧ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಪ್ರಚಾರ ಸಮಿತಿ ಮತ್ತು ಪ್ರಕಟಣೆಗೆ ಜಿಲ್ಲಾ ವಾರ್ತಾಧಿಕಾರಿಗಳ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಉದ್ಯೋಗ ಮೇಳದ ಬಗ್ಗೆ ಸೂಕ್ತ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಮೇಳ ಯಶಸ್ವಿಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು.
    ಕೆ.ರಾಜೇಂದ್ರ ಜಿಲ್ಲಾಧಿಕಾರಿ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts