More

    ಹೊಸ ಮಸೂದೆಗಳು ಕೃಷಿ ಕ್ಷೇತ್ರಕ್ಕೆ ವರದಾನ

    ಬಾಗಲಕೋಟೆ: ರೈತರು ಹಾಗೂ ಕೃಷಿ ಕ್ಷೇತ್ರದ ಸಮಗ್ರ ಸುಧಾರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಹೊಸ ತಿದ್ದುಪಡಿ ಕಾಯ್ದೆಗಳು ರೈತರಿಗೆ ಅನುಕೂಲ ಕಲ್ಪಿಸಲಿವೆ. ಕ್ರಾಂತಿಕಾರಿ ಬದಲಾವಣೆ ಉಂಟು ಮಾಡಲಿವೆ ಎಂದು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಳಲಿ ಹೇಳಿದರು.

    ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸುತ್ತಿದೆ. ಎಪಿಎಂಸಿ, ಭೂ ಸುಧಾರಣೆ ಕಾಯ್ದೆಗಳನ್ನು ರೂಪಿಸಿ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿದೆ. ವಿರೋಧ ಪಕ್ಷಗಳು ಸುಖಾಸುಮ್ಮನೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ಎಪಿಎಂಸಿ ಕಾಯ್ದೆಯಿಂದ ರೈತರು, ವ್ಯಾಪಾರಸ್ಥರು ಕೃಷಿ ಉತ್ಪನ್ನಗಳನ್ನು ಸ್ವತಂತ್ರವಾಗಿ ಮಾರಾಟ ಮಾಡಬಹುದಾಗಿದೆ. ಪರ್ಯಾಯ ವ್ಯಾಪಾರದ ವ್ಯವಸ್ಥೆ ಮೂಲಕ ನ್ಯಾಯಯುತ ದರ ನಿಗದಿ ಪಡಿಸಲು ಅವಕಾಶ ನೀಡಲಾಗಿದೆ. ಆನ್‌ಲೈನ್ ವ್ಯಾಪಾರಕ್ಕೆ ಕಾನೂನು ಚೌಕಟ್ಟಿನಲ್ಲಿ ಒತ್ತು ನೀಡಲಾಗಿದೆ ಎಂದರು.

    ಈ ಕಾಯ್ದೆಗಳ ಜಾರಿಯಿಂದ ರೈತರ ಆರ್ಥಿಕತೆ ಸುಧಾರಣೆಯಾಗಲಿದೆ. ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಮತ್ತು ಅಗತ್ಯತೆ ಎರಡನ್ನೂ ಈ ಕಾಯ್ದೆಗಳು ಪೂರೈಸಲಿವೆ. ಇದರಿಂದ ಉತ್ತಮ ಬೆಳೆ ಬೆಳೆಯುವತ್ತ ರೈತರು ಪ್ರೇರಿತರಾಗುತ್ತಾರೆ. ಎಪಿಎಂಎಂಸಿ ಹೊರತಾಗಿ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡುವ ಸೌಲಭ್ಯವನ್ನು ಕಾಯ್ದೆಗಳ ಮೂಲಕ ನೀಡಲಾಗಿದೆ. ಕೃಷಿ ಉತ್ಪನ್ನಗಳ ರಫ್ತು ನೀತಿಗೂ ಉತ್ತಮವಾಗಿದೆ ಎಂದು ತಿಳಿಸಿದರು.

    ರೈತ ಮೋರ್ಚಾ ಉಪಾಧ್ಯಕ್ಷೃ ಆರ್.ಟಿ. ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಣ್ಣ ಹೆರಕನ್ನವರ, ಸಂಗಮೇಶ ಹಿತ್ತಲಮನಿ ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts