21 C
Bengaluru
Thursday, January 23, 2020

ಬೆಸ್ಕಾಂನಿಂದ ಜಿಲ್ಲೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 195 ಗ್ರಾಮಗಳು ಬಾಧಿತಗೊಂಡಿದ್ದು, ಈ ಗ್ರಾಮಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಕಂಬ, ಟ್ರಾನ್‌ಸ್ಾರ್ಮರ್‌ಗಳ ದುರಸ್ತಿ ಕಾರ್ಯಕ್ಕೆ ಬೆಸ್ಕಾಂನಿಂದ ಹೆಚ್ಚುವರಿ ಸಿಬ್ಬಂದಿಯನ್ನು ಜಿಲ್ಲೆಗೆ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ತಿಳಿಸಿದ್ದಾರೆ.

ನೆರೆಯಿಂದ ಹೆಚ್ಚಿನ ಪ್ರಮಾಣದ ವಿದ್ಯುತ್ ಕಂಬಗಳು ಹಾನಿಗೊಳಗಾಗಿರುವ ಹಿನ್ನೆಲೆ ತುರ್ತಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಬೆಸ್ಕಾಂನ 50 ಸಿಬ್ಬಂದಿ ಒಳಗೊಂಡ ಒಂದು ತಂಡವನ್ನು ಜಿಲ್ಲೆಗೆ ಕಳುಹಿಸಲಾಗಿದ್ದು, ಇವರಲ್ಲಿ ಬಾಗಲಕೋಟೆಗೆ 20, ಜಮಖಂಡಿಗೆ 20 ಹಾಗೂ ಮುಧೋಳ ಪ್ರದೇಶಗಳಿಗೆ 10 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಸ್ಕಾಂ ತಂಡದಿಂದ ದುರಸ್ತಿ ಕಾರ್ಯ ಚುರುಕೊಂಡಿದ್ದು, ಹುನಗುಂದ ತಾಲೂಕಿನ ಕೂಡಲಸಂಗಮ, ಅಮೀನಗಡ, ಕಮತಗಿ ಹಾಗೂ ಬಾದಾಮಿ ತಾಲೂಕಿನ ನಂದಿಕೇಶ್ವರ, ಬೆಲೂರ, ಕುಳಗೇರಿ ಪ್ರದೇಶಗಳಲ್ಲಿ ವಿದ್ಯುತ್ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ತಂಡದಲ್ಲಿ ಮೀಟರ್ ತಪಾಸಣೆ ವಿಭಾಗದ ಸಿಬ್ಬಂದಿ ಇದ್ದು, ಪ್ರವಾಹದಿಂದ ಹಾಳಾದ ಟಿಸಿಗಳನ್ನು ಪರೀಕ್ಷಿಸಿ ಪೂರ್ತಿ ಹಾಳಾಗಿದ್ದಲ್ಲಿ ಹೊಸ ಟಿಸಿ ಅಳವಡಿಸಲಾಗುತ್ತಿದೆ.
ಬಿದ್ದ ಕಂಬಗಳನ್ನು ನಿಲ್ಲುಸುವ ಕಾರ್ಯ ಹಾಗೂ ಹೊಸ ಕಂಬ ನೆಡುವ ಕಾರ್ಯ ಮಾಡಲಾಗುತ್ತಿದೆ. ವಿದ್ಯುತ್ ತಂತಿಗಳನ್ನು ಸಹ ಬದಲಾಗಿಸುತ್ತಿದೆ. ಪ್ರವಾಹದಿಂದ 4466 ಕಿ.ಮೀ ವಿದ್ಯುತ್ ತಂತಿ ಹಾಳಾಗಿದ್ದು, ಈಗಾಗಲೇ 37.8 ಕಿ.ಮೀ ವಿದ್ಯುತ್ ತಂತಿ ಅಳವಡಿಸಲಾಗಿದೆ. ಜಮಖಂಡಿ ಭಾಗದಲ್ಲಿ ಕಡಕೋಳ, ಜಂಬಗಿ ಬಿ.ಕೆ ಮತ್ತು ಮುತ್ತೂರ, ಮುಧೋಳ ಭಾಗದಲ್ಲಿ ಗುಳಬಾಳ ಜಂಬಗಿಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿದ್ಯುತ್ ಕಂಬಗಳು ಉರಳಿ 172 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಪೈಕಿ 171 ಗ್ರಾಮಗಳಲ್ಲಿ ಪುನಃ ವಿದ್ಯುತ್ ಸಂಪರ್ಕ ನೀಡಲಾಗಿದೆ. ಚನಾಳ ಗ್ರಾಮ ಮಾತ್ರ ಬಾಕಿ ಉಳಿದಿದ್ದು, ನಾಳೆಯೊಳಗೆ ಸಂಪರ್ಕ ನೀಡಲಾಗುವುದು. ಪ್ರವಾಹದಿಂದ 7670 ವಿದ್ಯುತ್ ಕಂಬ ಮತ್ತು 559 ಟಿಸಿಗಳು ಹಾಳಾಗಿದ್ದು, ಈ ಪೈಕಿ 1129 ವಿದ್ಯುತ್ ಕಂಬ ಹಾಗೂ 745 ಟಿಸಿಗಳನ್ನು ರಿಪ್ಲೇಸ್ ಮಾಡಿರುವುದಾಗಿ ಕಾಶಿನಾಥ ಹಿರೇಮಠ ತಿಳಿಸಿದ್ದಾರೆ.

29766 ನೀರಾವರಿ ಪಂಪ್‌ಸೆಟ್‌ಗಳು ಹಾಳಾಗಿದ್ದು, ಈ ಪೈಕಿ 4870 ರಿಪ್ಲೇಸ್ ಮಾಡಲಾಗಿದೆ. ಜಿಲ್ಲೆಯಲ್ಲಿ ವಿದ್ಯುತ್ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ನಡೆದಿದ್ದು, ಬಾಗಲಕೋಟೆ ಹೆಸ್ಕಾಂ ಸಿಬ್ಬಂದಿ ಜತೆಗೆ ಗುತ್ತಿಗೆದಾರರಿಂದ ಸಿಬ್ಬಂದಿ ಪಡೆದು ಹೆಸ್ಕಾಂದಿಂದ ಸಲಕರಣೆ ಕೊಟ್ಟು ದುರಸ್ತಿ ಕಾರ್ಯ ಮಾಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...