More

    ಅಧಿಕಾರಿಗಳಿಗೆ ಕಾರಜೋಳ ಖಡಕ್ ಎಚ್ಚರಿಕೆ

    ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ಶಾಲಾ ಕೊಠಡಿ ಸೇರಿದಂತೆ ಇತರೆ ಕಾಮಗಾರಿಗಳನ್ನು ೆಬ್ರವರಿ 28 ರೊಳಗಾಗಿ ಪೂರ್ಣಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲೆಯ ಪ್ರವಾಹ ಪ್ರವಾಹ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಕೆಲವೊಂದು ಕಾಮಗಾರಿಗಳು ಮಾತ್ರ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಗಳು ೆಬ್ರವರಿ ಅಂತ್ಯಕ್ಕೆ ಪೂರ್ಣಗೊಳಿಸಲು ತಾಕೀತು ಮಾಡಿದರು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವ್ಯತ್ಯಾಸ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ನಂತರ ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಹದಿಂದ ‘ಎ’ ಕೆಟಗರಿಯಲ್ಲಿ 576, ‘ಬಿ’ ಕೆಟಗರಿಯಲ್ಲಿ 2638 ಹಾಗೂ ‘ಸಿ’ ಕೆಟಗರಿಯಲ್ಲಿ 8801 ಮನೆಗಳು ಸೇರಿದಂತೆ ಒಟ್ಟು 12013 ಮನೆಗಳು ಹಾನಿಗೊಳಾಗಿವೆ. ಅಂದಾಜು 200 ಕೋಟಿ ರೂ. ನಷ್ಟವಾಗಿದೆ. ಈ ಪೈಕಿ ‘ಎ’ ಮತ್ತು ‘ಬಿ’ ವರ್ಗದ ಮನೆಗಳು ಸೇರಿ ಒಟ್ಟು 1084 ಮನೆಗಳಿಗೆ ಒಟ್ಟು 100 ಕೋಟಿ ರೂ. ಪರಿಹಾರ ವಿತರಿಸಲಾಗಿದ್ದು, ಮನೆ ಕಟ್ಟಲು ಆರಂಭಿಸಿದ್ದಾರೆ. ಉಳಿದ ‘ಸಿ’ ವರ್ಗದ ಮನೆಗಳನ್ನು ಕಟ್ಟಲು ಆರಂಭಿಸುವಂತೆ ಸೂಚಿಸಲಾಗಿದೆ ಎಂದರು.

    ರಸ್ತೆ ಹಾನಿ ದುರಸ್ಥಿಗೆ ಒಟ್ಟು 839 ಕಾಮಗಾರಿಗೆ ಒಟ್ಟು 50 ಕೋಟಿ ರೂ. ಗಳಿಗೆ ಮಂಜೂರಾತಿ ನೀಡಲಾಗಿದೆ. 839 ಕಾಮಗಾರಿಗಳ ಪೈಕಿ 683 ಕಾಮಗಾರಿಗಳು ಪೂರ್ಣಗೊಂಡಿದ್ದು, 136 ಪ್ರಗತಿಯಲ್ಲಿವೆ. ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 40594 ರೈತ ಕುಟುಂಬಗಳ ವಿವಿಧ ಬೆಳೆ ನಾಶವಾಗಿದ್ದು, ಈ ಪೈಕಿ 30,408 ಕುಟುಂಬಗಳಿಗೆ ಒಟ್ಟು 88 ಕೋಟಿ ರೂ. ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಕಾಮಗಾರಿಗಳಿಗೆ 23 ಕೋಟಿ ರೂ. ವೆಚ್ಚದಲ್ಲಿ 338 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಸೇತುವೆ, ಸಿಡಿ ಕೆಲಸ ಹಾಗೂ ರಸ್ತೆ ಕಾಮಗಾರಿಗಳಿಗೆ 28 ಕೋಟಿ ವೆಚ್ಚದಲ್ಲಿ 202 ಕಾಮಗಾರಿಗಳಿಗೆ ಮಂಜೂರಾತಿ ನೀಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

    ಪ್ರಕೃತಿ ವಿಕೋಪ ನಿಧಿಯಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಸಿಡಿ ಕೆಲಸಗಳು ಸೇರಿ ಒಟ್ಟು 46 ಕಾಮಗಾರಿಗಳಿಗೆ 51.46 ಕೋಟಿ ರೂ. ಮಂಜೂರಾತಿ ನೀಡಲಾಗಿದೆ. ಈ ಪೈಕಿ ಈಗಾಗಲೇ 15 ಕಾಮಗಾರಿಗಳು ಪೂರ್ಣಗೊಂಡಿವೆ, 27 ಪ್ರಗತಿಯಲ್ಲಿವೆ. ಒಂದು ಕಾಮಗಾರಿ ಮಾತ್ರ ಸರ್ಕಾರ ಮಟ್ಟದಲ್ಲಿ ಉಳಿದಿದೆ. ಪ್ರವಾಸೋದ್ಯಮ ಇಲಾಖೆಯಿಂದ 14 ಪ್ರವಾಸಿ ಟ್ಯಾಕ್ಸಿಗಳು ಹಾಗೂ 2011 ರಿಂದ 2017 ವರೆಗೆ ಬಾಕಿ ಉಳಿದ 18 ಟ್ಯಾಕ್ಸಿ ಸೇರಿ ಒಟ್ಟು 32 ಟ್ಯಾಕ್ಸಿಗಳನ್ನು ಕೊಡಲಾಗುತ್ತಿದೆ ಎಂದರು.

    ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಜೈನ್, ನಾಗಾರ್ಜುನ ಗುತ್ತಿಗೆ ಕಂಪನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರಿಗೆ ಯಾವುದೇ ಗುತ್ತಿಗೆ ನೀಡಬಾರದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಗೋವಿಂದ ಕಾರಜೋಳ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ನಿರ್ಮಿಸುವ ಗುತ್ತಿಗೆ ನೀಡಲಾಗಿತ್ತು. ಕಾಮಗಾರಿ ಗುಣಮಟ್ಟ ಕಾಯ್ದುಕೊಂಡಿಲ್ಲ. ಗುತ್ತಿಗೆ ಪಡೆದ ಅನೇಕ ಕಂಪನಿಗಳು ಸರ್ಕಾರಕ್ಕೆ ಮೋಸ ಮಾಡುತ್ತಿವೆ. ಅಂತಹವರ ಮೇಲೆ ಕಠಿಣ ಕ್ರಮ ಜರುಗಿಸುವುದರ ಜತೆಗೆ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಪ್ರವಾಹ ಕಾಮಗಾರಿಗಳನ್ನು ಬಿವಿವಿ ಸಂಘದ ಇಂಜಿನಿಯರಿಂಗ್ ಕಾಲೇಜು ಮೂಲಕ ಥರ್ಡ್ ಪಾರ್ಟಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಕೆ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪವ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ. ಉಪಕಾರ್ಯದರ್ಶಿ ಎ.ಜಿ. ತೋಟದ, ಉಪ ವಿಭಾಗಾಧಿಕಾರಿಗಳಾದ ಎಂ. ಗಂಗಪ್ಪ, ಸಿದ್ದು ಹುಲ್ಲೊಳ್ಳಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಾರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಜ್ಯದಲ್ಲಿ 4 ಹೊಸ ಕೌಶಲ್ಯ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದ್ದು, ಈ ಪೈಕಿ ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಅಥಣಿಯಲ್ಲಿ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುತ್ತಿದೆ. ವಾಹನ ಚಾಲಕರ ಬೇಡಿಕೆ ಹೆಚ್ಚಾಗಿರುವದರಿಂದ ಈ ತರಬೇತಿ ಕೇಂದ್ರದ ಮೂಲಕ ನಿರುದ್ಯೋಗಿಗಳಿಗೆ ವಾಹನಾ ಚಾಲನಾ ತರಬೇತಿ ನೀಡುವುದರ ಜೊತೆಗೆ ಅವರಿಗೆ ಲೈಸನ್ಸ್ ಸಹ ಉಚಿತವಾಗಿ ನೀಡಿ ಕೆಲಸ ಸಿಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.
    ಗೋವಿಂದ ಕಾರಜೋಳ ಉಪ ಮುಖ್ಯಮಂತ್ರಿ





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts