18 C
Bangalore
Friday, December 6, 2019

ಗಣೇಶ, ಮೊಹರಂ ಸರಳವಾಗಿ ಆಚರಿಸಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬಾಗಲಕೋಟೆ: ಜಿಲ್ಲೆಯ ಲಕ್ಷಾಂತರ ಜನರು ಪ್ರವಾಹಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವುದರಿಂದ ಈ ಬಾರಿ ಗಣೇಶೋತ್ಸವ ಹಾಗೂ ಮೊಹರಂ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ ಸರಳವಾಗಿ ಆಚರಿಸಿ ನೊಂದ ಜೀವಿಗಳಿಗೆ ಸಹಾಯಹಸ್ತ ನೀಡುವಂತೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದರು.

ಜಿಲ್ಲಾಡಳಿತ ಸಭಾಭವನದಲ್ಲಿ ಭಾನುವಾರ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಗಳ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಒಪಿ ಬದಲಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ಪೂಜಿಸುವಂತೆ ಸಲಹೆ ಮಾಡಿದ ಜಿಲ್ಲಾಧಿಕಾರಿ, ಶಬ್ದ ಮಾಲಿನ್ಯ, ವಾಯು ಮಾಲಿನ್ಯ ತಡೆಯಲು ಪಟಾಕಿ ಹಾಗೂ ಕರ್ಕಶ ಧ್ವನಿಯ ಡಿಜೆ ಬಳಸಬೇಡಿ ಎಂದರು.

ವಿದ್ಯುತ್ ಸಮಸ್ಯೆಯಾಗದಂತೆ ಹೆಸ್ಕಾಂ ಲೈನ್‌ಮನ್‌ಗಳು ಜಾಗ್ರತೆ ವಹಿಸಿ ಯಾವುದೇ ಅನಾಹುತ ಆಗದಂತೆ ಎಚ್ಚರ ವಹಿಸಬೇಕು. ಪರ್ಯಾಯವಾಗಿ ಹೆಚ್ಚುವರಿ ಟಿಸಿಗಳನ್ನು ಇಟ್ಟುಕೊಳ್ಳಬೇಕು. ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ತಾತ್ಕಾಲಿಕ ಮೀಟರ್ ಅಳವಡಿಸಿಕೊಳ್ಳಬೇಕು. ಹೈಟೆನ್ಷನ್ ತಂತಿ ಕೆಳಗೆ ಮಂಟಪ ಬೇಡ. ಎಷ್ಟು ಎತ್ತರದ ಗಣೇಶ ಮಂಟಪ ಇದೆ ಎಂದು ಮೊದಲೇ ತಿಳಿಸಬೇಕು. ಸ್ವಚ್ಛತೆ, ಬೀದಿದೀಪ, ಾಗಿಂಗ್ ವ್ಯವಸ್ಥೆ ಮಾಡುವ ಜತೆಗೆ ರಸ್ತೆ ಗುಂಡಿ ಮುಚ್ಚಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾತನಾಡಿ, ಗಣೇಶ ಹಾಗೂ ಮೊಹರಂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಬೇಕು ಎಂದರು.
ಇನ್ನೊಬ್ಬರ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು. ಬಾಗಲಕೋಟೆ ನಗರದಲ್ಲಿ ಸಿಮೆಂಟ್ ಕ್ವಾರಿ, ಮಹಾರುದ್ರಪ್ಪನ ಹಳ್ಳದಲ್ಲಿ ಸಾರ್ವಜನಿಕರು ಗಣೇಶ ಮೂರ್ತಿಯನ್ನು ರಾತ್ರಿ 10ರ ಒಳಗಾಗಿ ವಿಸರ್ಜಿಸಬೇಕು. ಎಲ್ಲೆಡೆ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಸಾರ್ವಜನಿಕ ಗಣೇಶೋತ್ಸವವನ್ನು 5 ಮತ್ತು 7 ದಿನ ಮಾತ್ರ ಆಚರಿಸಲು ಸೂಚಿಸಿದರು.

ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ಮುಂಚಿತವಾಗಿ ಪರವಾನಗಿ ಪಡೆಯಬೇಕು. ಮುಖಂಡರು ಸ್ವಯಂ ಸೇವಕರನ್ನು ನೇಮಿಸಿಕೊಂಡು ಹಗಲು-ರಾತ್ರಿ ಪೊಲೀಸರ ಜತೆ ಸಹಕರಿಸಬೇಕು ಎಂದು ಹೇಳಿದರು.

ಮುಖಂಡ ಅಶೋಕ ಲಿಂಬಾವಳಿ ಮಾತನಾಡಿ, ಜಿಲ್ಲಾಧಿಕಾರಿ ಮನವಿಯಂತೆ ಸಂತ್ರಸ್ತರ ನೋವಿನಲ್ಲಿ ಭಾಗಿಯಾಗಿ ಸರಳ ಆಚರಣೆಗೆ ಸಹಕಾರ ನೀಡುತ್ತೇವೆ. ನಗರ ಗಜಾನನ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಲಾಗುವುದು. ಮಾಧವ ಸೇವಾ ಮಂಡಳಿಯಿಂದ ಜಾಗೋ ಹಿಂದುಸ್ತಾನಿ ದೇಶಭಕ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅನುಮತಿ ನೀಡಬೇಕು ಎಂದು ತಿಳಿಸಿದರು.

ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ರಾಜು ನಾಯ್ಕರ ಮಾತನಾಡಿ, ಸಾರಾಯಿ ಸಂಪೂರ್ಣ ಬಂದ್ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಎಂಎಸ್‌ಐಎಲ್ ತೆರೆದಿರುತ್ತವೆ. ಈ ಬಗ್ಗೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಎ.ದಂಡಿಯಾ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಉಪವಿಭಾಗಾಧಿಕಾರಿ ಎಚ್. ಜಯಾ, ಮುಖಂಡರಾದ ನಾಗರಾಜ ಹದ್ಲಿ, ಮಾಧವಿ ರಾಠೋಡ, ಹನುಮಂತ ನಾರಾಯಣಿ, ಜ್ಯೋತಿ ಭಜಂತ್ರಿ, ಎನ್.ಜಿ. ಪವಾರ, ಮನೋಹರ ಎಳಮ್ಮಿ, ವೈ.ಜೆ. ಪಠಾಣ, ಹಾಜಿಸಾಬ ದಂಡೀನ್, ಶಪೀಕ್ ದೊಡಕಟ್ಟಿ ಇತರರು ಉಪಸ್ಥಿತರಿದ್ದರು.

ಸ್ವಚ್ಛ ಭಾರತ ಅಭಿಯಾನಕ್ಕೆ ಕೈ ಜೋಡಿಸಬೇಕು. ಈ ಬಾರಿ ವಿಶ್ವಸಂಸ್ಥೆಯಲ್ಲೂ ಗಣೇಶೋತ್ಸವ ಆಚರಿಸುತ್ತಿರುವುದರಿಂದ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿದಂತಾಗಿದೆ.
– ಆರ್.ರಾಮಚಂದ್ರನ್ ಜಿಲ್ಲಾಧಿಕಾರಿ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...