More

    ಬಿಜೆಪಿಗೆ ತಕ್ಕ ಪಾಠ ಕಲಿಸಿ

    ಬಾಗಲಕೋಟೆ: ಇಂಧನ, ಅಡುಗೆ, ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಯುವ ಜನತಾ ದಳ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ನಗರದ ಜೆಡಿಎಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತ ತಲುಪಿತು. ಅಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆಯಲ್ಲಿ ಅಡುಗೆ ಸಿದ್ಧಪಡಿಸಿದ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವೀನಮರದ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ನಾವು ಅಧಿಕಾರಕ್ಕೆ ಬಂದರೇ ಅಚ್ಛೇದಿನ್ ಬರುತ್ತವೆ. ಬಡವರು, ಮಧ್ಯಮ ವರ್ಗದವರಿಗೆ ವಿಶೇಷ ಕೊಡುಗೆ ಸಿಗಲಿದೆ ಎಂದು ಭರವಸೆ ನೀಡಿದ್ದರು. ಇಂದಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರು ಜೀವನ ನಡೆಸಲು ಒದ್ದಾಡುತ್ತಿದ್ದಾರೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದ್ದು, ಜನರ ಬೀದಿಗೆ ಬಿದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರು ಸಹ ಕೇಂದ್ರ ಸರ್ಕಾರ ಇಂಧನ ಬೆಲೆ ದಿನೇ ದಿನೇ ಏರಿಕೆ ಮಾಡುತ್ತಿದೆ. ಇದರಿಂದ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಬಡವರು, ಮಧ್ಯಮ ವರ್ಗದ ಜನರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಗಮನ ಹರಿಸದರೇ ಸ್ವಾರ್ಥ ಸಾಧನೆಗಾಗಿ ಚುನಾವಣೆ ರ‌್ಯಾಲಿಯಲ್ಲಿ ಬಿಜಿಯಾಗಿದ್ದಾರೆ ಎಂದು ದೂರಿದರು.

    ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ ಮೋಮಿನ ಮಾತನಾಡಿ, ಬಿಜೆಪಿ ಸರ್ಕಾರಕ್ಕೆ ಬಡವರು, ರೈತರು, ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲ. ತಮ್ಮ ಮನಬದ್ದಂತೆ ಆಡಳಿತ ನಡೆಸುತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಅಧಿಕಾರಕ್ಕೆ ಬರುವ ಮುನ್ನ ನೂರಾರು ಭರವಸೆ ನೀಡಿದ್ದ ಬಿಜೆಪಿ ಇಂದು ಎಲ್ಲವು ಮರೆತಿದೆ ಎಂದು ಕಿಡಿಕಾರಿದರು.

    ಮುಖಂಡರಾದ ಶರಣು ಹುರಕಡ್ಲಿ, ಗೋಪಾಲ ಲಮಾಣಿ, ನಾರಾಯಣ ಘೋರ್ಪಡೆ, ಪ್ರಭುರಾಜ ಪಾಟೀಲ, ಹನುಮಂತ ಶಿವಪ್ಪ ಗಾಣಗೇರ, ವಿಜಯಮಹಾಂತೇಶ ಗದ್ದನಕೇರಿ, ಶಿವಪ್ರಸಾದ ಗದ್ದಿ, ರೇಣುಕಾ ಭಜಂತ್ರಿ, ರಾಜುಕುಮಾರ ನ್ಯಾಮಗೌಡ, ರಾಜು ಸಂಶಿ ಇದ್ದರು.

    ಬೆಲೆ ಏರಿಕೆಯಿಂದ ಬಡವರು, ಕಾರ್ಮಿಕರ ಬದುಕು ದುಸ್ಥರವಾಗಿದೆ. ಹಿಂದೆ ಇಂಧನ ಬೆಲೆ 1, 2 ರೂ. ಏರಿಕೆಯಾದರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಯವರು ಇಂದು ಮೌನವಾಗಿ ಕುಳಿತಿದ್ದಾರೆ. ಅಚ್ಛೇದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಜನರಿಗೆ ಹೊಡೆತ ನೀಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ.
    ರೇಣುಕಾ ಭಜಂತ್ರಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ



    ಬಿಜೆಪಿಗೆ ತಕ್ಕ ಪಾಠ ಕಲಿಸಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts