More

    ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ

    ಬಾಗಲಕೋಟೆ: ಗಣೇಶ ಚತುರ್ಥಿ ಹಬ್ಬಕ್ಕೆ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪಾಲನೆಗೆ ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಗಣೇಶ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಪೊಲೀಸ್ ಇಲಾಖೆಯಿಂದ ಎನ್‌ಒಸಿ ಪಡೆಯುವುದು ಕಡ್ಡಾಯವಾಗಿದೆ. ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ವಿನಾಯಿತಿ ನೀಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಳವಾಗಿ, ಭಕ್ತಿಪೂರಕವಾಗಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ಕಲ್ಪಿಸುವ ಮೂಲಕ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳನ್ನು ನೂರಕ್ಕೆ ನೂರರಷ್ಟು ಪಾಲನೆಯಾಗಬೇಕು. ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ ಎಂದರು.

    ಎಸ್ಪಿ ಲೋಕೇಶ ಜಗಲಾಸರ್ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪ್ರತಿ ವಾರ್ಡ್‌ಗೆ ಒಂದು ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ. ರಸ್ತೆ ಮತ್ತು ಫುಟ್‌ಪಾತ್‌ಗಳ ಮೇಲೆ ಪೆಂಡಾಲ್ ಹಾಕುವಂತಿಲ್ಲ. ಗಣೇಶ ಪ್ರತಿಷ್ಠಾಪನೆಗೆ 5 ದಿನಕ್ಕೆ ಸೀಮಿತಗೊಳಿಸಲಾಗಿದ್ದು, 5ನೇ ದಿನ ಮಂಗಳವಾರ ವಿಸರ್ಜನೆ ಮಾಡಲು ಆಗದಿದ್ದರೆ ಒಂದು ದಿನ ಮುಂಚಿತವಾಗಿ ವಿಜರ್ಸನೆ ಮಾಡಬೇಕು. ಮತ್ತೊಂದು ದಿನ ವಿಸರ್ಜನೆಗೆ, ಮೆರವಣಿಗೆ ಅವಕಾಶವಿರುವುದಿಲ್ಲ ಎಂದರು.

    ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಬಂದ ಅರ್ಜಿಗಳನ್ನು ಪೆಂಡಿಂಗ್ ಇಟ್ಟುಕೊಳ್ಳಬಾರದು. ಗಣೇಶ ವಿಸರ್ಜನೆಗೆ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಸಂಚಾರಿ ತೊಟ್ಟಿ ವ್ಯವಸ್ಥೆ ಕಲ್ಪಿಸಬೇಕು. ವಿಸರ್ಜನೆ ವೇಳೆ ಜಂಟಿ ತಂಡ ರಚಿಸಿ ಕೆಲಸ ನಿರ್ವಹಿಸಬೇಕು. ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಸರ್ಕಾರಿ ಕಚೇರಿ, ಪೊಲೀಸ್ ಠಾಣೆ ಮತ್ತು ಹೆಸ್ಕಾಂ ಕಚೇರಿಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಉಳಿದವರಿಗೆ ಮಾದರಿಯಾಗಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಕೇವಲ ದರ್ಶನಕ್ಕೆ ಸೀಮಿತವಾಗಿದ್ದು, ಯಾವುದೇ ರೀತಿಯ ಮನರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳುವಂತಿಲ್ಲ ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಉಪ ವಿಭಾಗಾಧಿಕಾರಿಗಳಾದ ಸಿದ್ದು ಹುಲ್ಲೊಳ್ಳಿ, ಎಂ.ಗಂಗಪ್ಪ, ತಹಸೀಲ್ದಾರ್ ಗುರುಸಿದ್ದಯ್ಯ ಹಿರೇಮಠ ಇತರರಿದ್ದರು.

    ಪರಿಷ್ಕೃತ ಮಾರ್ಗಸೂಚಿಗಳು

    ಗಣೇಶ ಆಚರಣೆಯ ಆಯೋಜಕರು ಕೋವಿಡ್-19ರ ನೆಗೆಟಿವ್ ವರದಿ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಕಡ್ಡಾಯ.
    ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.

    ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

    
    
    Community-verified icon
    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts