24.7 C
Bangalore
Sunday, December 15, 2019

ಕೋಟೆನಾಡಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Latest News

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ಲವ್​ ಫೇಲ್ಯೂರ್​ನಿಂದ ಯುವಕ ಆತ್ಮಹತ್ಯೆ: ಶವಪರೀಕ್ಷೆ ನಿರಾಕರಿಸಿ ಮೃತದೇಹ ಹೊತ್ತೊಯ್ದವರು ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಕರ್ನೂಲ್​: ಶವಪರೀಕ್ಷೆ ಬೇಡವೆಂದು ಹೇಳಿ ಯುವಕರಿಬ್ಬರು ತಮ್ಮ ಕುಟುಂಬದ ಸದಸ್ಯನೊಬ್ಬನ ಮೃತದೇಹವನ್ನು ಬೈಕ್​ನಲ್ಲಿ ಹಾಕಿಕೊಂಡು ಪರಾರಿಯಾಗುವಾಗ ಪೊಲೀಸರು ಬೆನ್ನತ್ತಿ ಮೃತದೇಹವನ್ನು ಮರಳಿ ತಂದ...

ಬುದ್ಧ, ಬಸವಣ್ಣ, ಅಂಬೇಡ್ಕರ್​ರನ್ನು ದೇಶದಿಂದ ಓಡಿಸಿದವರು ಬಿಜೆಪಿಗೆ ಮತ ಹಾಕಿದ್ದಾರೆ: ಸತೀಶ್​ ಜಾರಕಿಹೊಳಿ ವಿವಾದಿತ ಹೇಳಿಕೆ

  ಗೋಕಾಕ್: ಉಪ ಚುನಾವಣೆಯಲ್ಲಿ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಪರವಾಗಿದ್ದವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಅವರನ್ನು ದೇಶದಿಂದ...

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಎಂದೆಲ್ಲ ತಲೆ ಕೆಡಿಸಿಕೊಂಡಿದ್ರೆ ಒಮ್ಮೆ ಈ ಟಿಪ್ಸ್​ಗಳನ್ನು ಓದಿ…

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ. ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ...

ರಾಹುಲ್, ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು: ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದರು. ನಾನು ರಾಹುಲ್​ ಸಾವರ್ಕರ್​ ಅಲ್ಲ, ರಾಹುಲ್​...

ಬಾಗಲಕೋಟೆ: ಜಿಲ್ಲಾದ್ಯಂತ ಸೆ.2ರಿಂದ ಗಣೇಶ ಉತ್ಸವ, ಸೆ.5ರಂದು ಮೊಹರಂ ಹಬ್ಬಗಳ ಆಚರಣೆ ಹಿನ್ನೆಲೆ ಕೋಟೆನಾಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲೆಯ ವಿವಿಧ ಭಾಗಗಳನ್ನು ಅತಿ ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಹೇಳಿದರು.

ಜಿಲ್ಲೆಯಲ್ಲಿ 2511 ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಮತ್ತು 1888 ಸ್ಥಳಗಳಲ್ಲಿ ಮೊಹರಂ ಪಾಂಜಾಗಳು ಸ್ಥಾಪನೆ ಆಗಲಿವೆ. 99 ಸೂಕ್ಷ್ಮ, 9 ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. 500 ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಶಾಂತಿಯುತ, ಸರಳವಾಗಿ ಹಬ್ಬಗಳ ಆಚರಣೆ ಮಾಡುವ ನಿಟ್ಟಿನಲ್ಲಿ ಜನತೆ ಒತ್ತು ನೀಡಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಸಾವಿರ ಪೊಲೀಸರ ನಿಯೋಜನೆ
3 ಡಿವೈಎಸ್‌ಪಿ, 15 ಸಿಪಿಐ, 40 ಪಿಎಸ್‌ಐ, 1000 ಪೊಲೀಸ್, 600 ಹೋಮ್‌ಗಾರ್ಡ್, 8 ಕೆಎಸ್‌ಆರ್‌ಪಿ ತುಕಡಿ, 12 ಡಿಎಆರ್, 1 ಅರೆ ಸೇನಾಪಡೆಯನ್ನು ಬಂದೋ ಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ. ಪ್ರತಿ ಸಾರ್ವಜನಿಕ ಗಣೇಶ ಉತ್ಸವ ಮಂಡಳಿಯಿಂದ 15 ರಿಂದ 50 ಜನ ಸ್ವಯಂಸೇವಕರನ್ನು ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಯ ಗಡಿ ಭಾಗದಲ್ಲಿ 11 ಕಡೆ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. 1487 ರೌಡಿಶೀಟರ್, 408 ಜನ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು, 907 ಜನ ಹಳೇ ಆರೋಪಿಗಳಿಗೆ ಶಾಂತಿ ಭಂಗ ಮಾಡದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚೆಕ್‌ಪೋಸ್ಟ್‌ಗಳಲ್ಲಿ ಪಿಒಪಿ ಮೂರ್ತಿಗಳು, ಡಿಜೆ ಸೌಂಡ್ ಬಾಕ್ಸ್‌ಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗುವುದು. ಹಬ್ಬದ ಸಂದರ್ಭವನ್ನು ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲಾಗುವುದು. ಮೆರವಣಿಗೆ ಮಾರ್ಗಗಳನ್ನು ಪರಿಶೀಲಿಸಲಾಗಿದ್ದು, ರಾತ್ರಿ 10 ರಿಂದ 11 ಗಂಟೆಯೊಳಗೆ ಗಣೇಶ ಮೂರ್ತಿ ವಿಸರ್ಜನೆ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ಪಾಂಜಾಗಳು, ಗಣೇಶ ವಿಸರ್ಜನೆ ಮೆರವಣಿಗೆ ಒಂದೇ ಸಮಯ ನಡೆದಲ್ಲಿ, ಶಾಂತಿ ಕಾಪಾಡಲು ಸೂಕ್ತ ಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ವಸತಿ ಗೃಹಗಳನ್ನು ಪರಿಶೀಲನೆ ಮಾಡಲಾಗಿದ್ದು, ಹೊರಗಿನವರ ವಿವರ ಪಡೆದುಕೊಳ್ಳಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ವಿಸರ್ಜನಾ ಸ್ಥಳಗಳಲ್ಲಿ ಲೈಟಿಂಗ್, ಡೀಸೆಲ್ ಜನರೇಟರ್, ಬ್ಯಾರಿಕೇಡ್ ಅಳವಡಿಸಲಾಗಿದೆ. ಈಜು ತಜ್ಞರು, ಲ್ೈ ಜಾಕೆಟ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಗ್ನಿ ದುರಂತಗಳು ಸಂಭವಿಸದಂತೆ ಮರಳಿನ ಬಕೆಟ್ ಇಟ್ಟುಕೊಳ್ಳುವಂತೆ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಒಂದು ಆಂಬುಲೆನ್ಸ್ ಇರಿಸಲಾಗಿದೆ. ಜಿಲ್ಲಾಡಳಿತದಿಂದ 20 ಮ್ಯಾಜಿಸ್ಟ್ರೇಟ್‌ರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಬಾಗಲಕೋಟೆ ನಗರ ಸೇರಿ ಜಿಲ್ಲಾದ್ಯಂತ ಪೊಲೀಸ್ ಪರೇಡ್ ನಡೆಸಲಾಗಿದೆ. ನಮ್ಮ ಭಕ್ತಿ, ಸಂಭ್ರಮ ಇನ್ನೊಬ್ಬರಿಗೆ ನೋವು ಉಂಟು ಮಾಡಬಾರದು. ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಶಬ್ದ ಮಾಲಿನ್ಯ ಆಗದಂತೆ ನೋಡಿಕೊಳ್ಳಬೇಕು. ಡಿಜೆ ಸಂಗೀತಕ್ಕೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಎರಡು ಸೌಂಡ್ ಬಾಕ್ಸ್‌ಗಿಂತ ಹೆಚ್ಚು ಇದ್ದಲ್ಲಿ ವಶಕ್ಕೆ ಪಡೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಂಟ್ರೋಲ್ ರೂಮ್ ಮೊ.ನಂ. 9480803900 ಸಂಪರ್ಕಿಸಬಹುದು.
– ಲೋಕೇಶ ಜಗಲಾಸರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...