More

    ನೀರಾವರಿ ನಿಗಮದಿಂದ ಅನುಮೋದನೆ ನೀಡಿ

    ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು 411 ಕೋಟಿ ರೂ. ಮೊತ್ತದ ಅನವಾಲ ಏತ ನೀರಾವರಿ ಯೋಜನೆಗೆ ಕರ್ನಾಟಕ ನೀರಾವರಿ ನಿಗಮ ಮಂಡಳಿ ಸಭೆಯಲ್ಲಿ ಕೂಡಲೇ ಅನುಮೋದನೆ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ, ಬೀಳಗಿ ಶಾಸಕ ಮುರುಗೇಶ ನಿರಾಣಿ ಮನವಿ ಮಾಡಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಡಾ.ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ಪ್ರದೇಶವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅತಿ ಹೆಚ್ಚು ಪ್ರದೇಶ ಬಾಧಿತವಾಗಿರುವುದು ಬೀಳಗಿ ಕ್ಷೇತ್ರ. ಘಟಪ್ರಭಾ ಬಲದಂಡೆ ಕಾಲುವೆ ನಿರ್ಮಾಣವಾಗಿ 18 ವರ್ಷ ಗತಿಸಿದರೂ 119 ಕಿ.ಮೀ. ದಿಂದ 199.3 ಕಿ.ಮೀ. ವರೆಗಿನ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಹರಿದಿಲ್ಲ. ಇದರಿಂದ 1425 ಹೆಕ್ಟೇರ್ ಪ್ರದೇಶ ನೀರಾವರಿಯಿಂದ ವಂಚಿತವಾಗಿದೆ ಎಂದು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ದೇವನಾಳ ಹತ್ತಿರ ಘಟಪ್ರಭಾ ನದಿಗೆ ಜಾಕ್‌ವೆಲ್ ನಿರ್ಮಿಸಲು ರೈಸಿಂಗ್ ಪೈಪ್‌ಲೈನ್ ಮೂಲಕ 19.20 ಕಿ.ಮೀ. ದೂರದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ಅನವಾಲ ಏತ ನೀರಾವರಿ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಅಲ್ಲದೆ, 2021-22ನೇ ಸಾಲಿನ ಬಜೆಟ್‌ನಲ್ಲಿ ಕಾಮಗಾರಿ ನಡೆಸಲು ಆದೇಶಿಸಲಾಗಿದೆ. ಆದ್ದರಿಂದ ಕೂಡಲೇ ಕರ್ನಾಟಕ ನೀರಾವರಿ ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಕೂಡಲೇ ಅನುಮೋದನೆ ನೀಡಬೇಕು ಎಂದು ಸಿಎಂಗೆ ಮನವಿ ಮಾಡಿದ್ದಾರೆ.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts