20.4 C
Bangalore
Monday, December 9, 2019

ಸರ್ಕಾರಿ ಆಸ್ಪತ್ರೆಯಲ್ಲಿ ತಂದೆಗೆ ಚಿಕಿತ್ಸೆ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ಅಂದರೆ ಮೂಗು ಮುರಿಯೋರೆ ಜಾಸ್ತಿ. ಅವು ಕಡುಬಡವರಿಗೆ ಸೀಮಿತ ಎನ್ನುವ ಮನೋಭಾವನೆ. ಅದರಲ್ಲೂ ಸ್ವಲ್ಪ ಅಧಿಕಾರ ಅಂತಸ್ತು ಬಂದರೆ ಸಾಕು ಸರ್ಕಾರಿ ಆಸ್ಪತ್ರೆ ಕಡೆಗೆ ನೋಡೋಕೇ ಹೋಗಲ್ಲ. ಸಣ್ಣಪುಟ್ಟ ಕಾಯಿಲೆಗೂ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ.

ಇದಕ್ಕೆ ಅಪವಾದ ಎನ್ನುವಂತೆ ಬಾಗಲಕೋಟೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರು ತಮ್ಮ ತಂದೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಸರಳತೆ ಮೆರೆಯುವ ಜತೆಗೆ ನಮ್ಮ ನಡೆಯ ಮೂಲಕ ಇತರ ಅಧಿಕಾರಿಗಳಿಗೆ ಮಾದರಿ ಆಗಿದ್ದಾರೆ.

ಭಾನುವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರ ತಂದೆ ರಾಮಸ್ವಾಮಿ (74) ಅವರಿಗೆ ಎದೆ.ಕಿವಿ. ಗಂಟಲು ಸಮಸ್ಯೆ ಕಾಣಿಸಿಕೊಂಡಿದ್ದರಿಂದ ನೇರವಾಗಿ ನವನಗರದ ಜಿಲ್ಲಾ ಆಸ್ಪತ್ರೆಗೆ ಸ್ವತಃ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇದ್ದ ಡಾ. ಸಂಗಮ ಹಾಗೂ ಡಾ. ಪಾಟೀಲ ಅವರು ರಾಮಸ್ವಾಮಿ ಅವರ ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಿದರು. ಈ ಹಿಂದೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಎಸ್.ಎಸ್. ನಕುಲ್ ಸಹ ತಾವು ಹಾಗೂ ಕುಟುಂಬ ಸದಸ್ಯರಿಗೆ ಆರೋಗ್ಯ ಸಮಸ್ಯೆ ಆದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ವೈದ್ಯರು, ಜನರಲ್ಲಿ ವಿಶ್ವಾಸ ವೃದ್ಧಿ
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆಗೆ ಮಾತನಾಡಿದ ಡಿಸಿ ರಾಮಚಂದ್ರನ್, ಇದನ್ನು ಸರಳತೆ ಎನ್ನುವುದಕ್ಕಿಂತ ಇದರಿಂದ ಒಳ್ಳೆಯದು ಆಗುತ್ತದೆ. ಹಿರಿಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದರಿಂದ ಸಾರ್ವಜನಿಕರಲ್ಲಿ ಆಸ್ಪತ್ರೆ, ವೈದ್ಯರ ಬಗ್ಗೆ ಹೆಚ್ಚಿನ ವಿಶ್ವಾಸ ಮೂಡಿಸುತ್ತದೆ. ಆಸ್ಪತ್ರೆಯ ಸಮಸ್ಯೆಗಳು ಗಮನಕ್ಕೆ ಬಂದಿದೆ. ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಆಗಬೇಕಿದೆ. ಇದೇ ಕಾರಣಕ್ಕೆ ತಂದೆಯವರನ್ನು ಕರೆದುಕೊಂಡು ಬಂದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಅವರ ತಂದೆಯವರಿಗೆ ರೂಟಿನ್ ಚೆಕಪ್ ಹಾಗೂ ಕಿವಿಯಲ್ಲಿ ಪಂಗಲ್ ಇನ್‌ಪೆಕ್ಷನ್ ಇದ್ದಿದ್ದರಿಂದ ಡಿಸಿ ಅವರೇ ತಂದೆಯ ಜತೆಗೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಕೊಡಿಸಿದರು. ಹೀಗೆ ಹಿರಿಯ ಅಧಿಕಾರಿಗಳು ಬರುವುದರಿಂದ ಆಸ್ಪತ್ರೆಯ ವೈದ್ಯರಲ್ಲೂ ಆತ್ಮವಿಶ್ವಾಸ ವದ್ಧಿಸುತ್ತದೆ. ಜತೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಬರಲು ಪ್ರೇರಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ.
– ಡಾ.ಅನಂತ ದೇಸಾಯಿ ಡಿಎಚ್‌ಒ ಬಾಗಲಕೋಟೆ

ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಹಂತದಲ್ಲಿ ವ್ಯವಸ್ಥೆ ಚೆನ್ನಾಗಿದೆ. ಇನ್ನೂ ಸುಧಾರಣೆ ಆಗಬೇಕು. ಹಂತಹಂತವಾಗಿ ಸರಿಪಡಿಸಲಾಗುವುದು. ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ದೊರೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ವದ್ಧಿಸುವ ಕೆಲಸ ಆಗಬೇಕು. ಇದೇ ಕಾರಣಕ್ಕೆ ತಂದೆಯವರಿಗೆ ಆರೋಗ್ಯ ತಪಾಸಣೆಗೆ ಕರೆದುಕೊಂಡು ಬಂದಿದ್ದೆ.
-ಆರ್.ರಾಮಚಂದ್ರನ್ ಜಿಲ್ಲಾಧಿಕಾರಿ, ಬಾಗಲಕೋಟೆ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...