More

    ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಿ

    ಬಾಗಲಕೋಟೆ: ಬಾಗಲಕೋಟೆಗೆ ಘೋಷಣೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರಸಕ್ತ ಬಜೆಟ್‌ನಲ್ಲಿ ಅಗತ್ಯ ಅನುದಾನ ನೀಡಿ, ಕೂಡಲೇ ಕಾಲೇಜು ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.

    ಮಂಗಳವಾರ ನಗರದ ಬಸವೇಶ್ವರ ವೃತ್ತದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎಂ.ಪಿ. ನಾಡಗೌಡ ಮಾತನಾಡಿ, ಬಾಗಲಕೋಟೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿದರೂ ಈವರೆಗೆ ಆರಂಭಿಸಿಲ್ಲ. ಇದಕ್ಕೆ ಅಗತ್ಯ ಮೂಲಸೌಲಭ್ಯಗಳಿವೆ. ಸರ್ಕಾರ ಘೋಷಿತ ಕಾಲೇಜು ಆರಂಭಿಸಲು ಅನುದಾನ ನೀಡಬೇಕು. ಇದರಿಂದ ಈ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೂ ವೈದ್ಯಕೀಯ ಪದವಿ ಪಡೆಯಲು, ಈ ಭಾಗದ ರೋಗಿಗಳಿಗೂ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ಆಗ್ರಹಿಸಿದರು.

    ಕರವೇ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ವೈದ್ಯಕೀಯ ಕಾಲೇಜನ್ನು ಸರ್ಕಾರ ಘೋಷಣೆ ಮಾಡಿತ್ತು. ಐದು ವರ್ಷ ಕಳೆದರೂ ಈವರೆಗೆ ಆರಂಭಿಸಿಲ್ಲ. ಈ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳೂ ನಡೆದಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

    ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಖಾಜಿ, ಕರವೇ ಪ್ರಧಾನ ಕಾರ್ಯದರ್ಶಿ ಬಸವರಾಜ ಧರ್ಮಂತಿ, ಪ್ರಮುಖರಾದ ಸಂಗಮೇಶ ಕಲ್ಲೂರ, ಬಸವರಾಜ ಅಂಬಿಗೇರ, ಮಲ್ಲು ಕಟ್ಟಿಮನಿ, ಆತ್ಮಾರಾಮ ನೀಲನಾಯಕ, ರಾಜು ರಾಠೋಡ, ಪ್ರವೀಣ ಪಾಟೀಲ, ಡಿ.ಡಿ. ನದಾಫ್, ಅಶೋಕ ಪೂಜಾರಿ ನೇತೃತ್ವ ವಹಿಸಿದ್ದರು.

    ಕರವೇ ಪದಾಧಿಕಾರಿಗಳು, ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಹಿ ಸಂಗ್ರಹಿಸಿದರು. ಅಲ್ಲದೆ ೆ. 26ರಂದು ವಿದ್ಯಾಗಿರಿಯಲ್ಲಿ ಸಹಿ ಸಂಗ್ರಹ ಮಾಡಲು ನಿರ್ಧರಿಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ವೈದ್ಯಕೀಯ ಕಾಲೇಜು ಆರಂಭಕ್ಕೆ ಒತ್ತಾಯಿಸಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts