ಶುಭ ಮುಹೂರ್ತಕ್ಕಾಗಿ ಹುಡುಕಾಟ!

blank

ಬಾಗಲಕೋಟೆ: ಜಿಲ್ಲೆಯಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಡಿ.7ರಿಂದ ಆರಂಭಗೊಳ್ಳಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ಹಳ್ಳಿ ಫೈಟ್ ಕಾವು ಪಡೆದುಕೊಂಡಿದ್ದು, ಶುಭ ಘಳಿಗೆ ನೋಡಿಕೊಂಡು ಉಮೇದುವಾರಿಕೆ ಸಲ್ಲಿಸಲು ಹುರಿಯಾಳುಗಳು ಅಣಿಯಾಗಿದ್ದಾರೆ.

ಹಿರಿಯರು, ಕಿರಿಯರು, ಪದವೀಧರರು, ಅನಕ್ಷರಸ್ಥರು ಸೇರಿದಂತೆ ಎಲ್ಲ ವರ್ಗದ ಜನ ತಾವು ಒಂದು ಕೈ ನೋಡಿಬಿಡೋಣ ಎಂದು ಸಜ್ಜಾಗಿದ್ದಾರೆ. ಈಗಾಗಲೇ ಮತ ಬೇಟೆಯನ್ನು ಶುರುವಿಟ್ಟುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಡಿ.22 ರಂದು ಮೊದಲ ಹಂತದಲ್ಲಿ ಜಮಖಂಡಿ, ಮುಧೋಳ, ಬೀಳಗಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ 89 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಡಿ.7 ರಿಂದ 11 ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಡಿ.12 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಡಿ.14 ಕೊನೆಯ ದಿನವಾಗಿದೆ. ಡಿ.22 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ಜರುಗಲಿದೆ.

ನಾಮಪತ್ರ ದ್ವಿಗುಣಗೊಳ್ಳುವ ಸಾಧ್ಯತೆ
2015ರಲ್ಲಿ ಜಿಲ್ಲೆಯ ಒಟ್ಟು 197 ಪಂಚಾಯಿತಿಗಳ 3265 ಸ್ಥಾನಗಳಿಗೆ ಚುನಾವಣೆ ಘೋಷಣೆ ಆಗಿತ್ತು. ಇದರಲ್ಲಿ 327 ಸ್ಥಾನಗಳು ಅವಿರೋಧ ಆಯ್ಕೆ ಹಾಗೂ 28 ಸ್ಥಾನಗಳಿಗೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಅಂತಿಮವಾಗಿ 2910 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 3992 ಸಾಮಾನ್ಯ, 3562 ಮಹಿಳೆಯರು ಸೇರಿ 7554 ಅಭ್ಯರ್ಥಿಗಳು ಕಣದಲ್ಲಿ ಉಳಿದಿಕೊಂಡಿದ್ದರು. 3547 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದರು.

ಈ ಸಾರಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 89, ಎರಡನೇ ಹಂತದಲ್ಲಿ 104 ಸೇರಿ 193 ಗ್ರಾಮ ಪಂಚಾಯಿತಿಗಳ 3169 ಸ್ಥಾನಗಳಿಗೆ ಚುನಾವಣೆ ಜರುಗಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಿದ ಬಳಿಕ ಗುಳೆ ಹೋದವರು, ನೌಕರಿಗಾಗಿ ಮಹಾನಗರಗಳಿಗೆ ವಲಸೆ ಹೋದವರು ತಮ್ಮೂರಿಗೆ ವಾಪಸ್ ಆಗಿದ್ದಾರೆ. ಅವರಲ್ಲಿಯೂ ಒಂದಿಷ್ಟು ಜನ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದು, ಊರಿನ ನಾಯಕರು, ಪಕ್ಷದ ಮುಖಂಡರ ಎದುರು ತಮ್ಮ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಸಾರಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವವರ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆ ಇದೆ.

ಯುವಕರ ಆಸಕ್ತಿ
ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಈ ಸಾರಿ ಯುವಕರು ಹೆಚ್ಚಾಗಿ ಆಸಕ್ತಿ ತೋರುತ್ತಿದ್ದಾರೆ. ಅದರಲ್ಲೂ 25 ರಿಂದ 40 ವಯಸ್ಸಿನ ಒಳಗಿನ ವಯೋಮಾನದವರು ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಯಾವುದೇ ಪಕ್ಷ, ನಾಯಕರ ಬೆಂಬಲಿಗರಾಗಿ ಚುನಾವಣೆ ಎದುರಿಸುವ ಬದಲು ಪಕ್ಷೇತರರಾಗಿ ಸ್ಪರ್ಧೆ ಮಾಡಲು ಸಿದ್ಧರಾಗಿರುವುದು ಗಮನಾರ್ಹ ಸಂಗತಿ.

ನಾನು ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದು, ಸದ್ಯ ಕಾನೂನು ಪದವಿ ಅಧ್ಯಯನ ಮಾಡುತ್ತಿದ್ದೇನೆ. ಈ ಸಾರಿ ಬಾಗಲಕೋಟೆ ತಾಲೂಕಿನ ಸಿಕ್ಕೇರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಯಾವುದೇ ಪಕ್ಷದ ಬೆಂಬಲ ಪಡೆದುಕೊಳ್ಳುವುದಿಲ್ಲ. ನಮ್ಮ ಹಳ್ಳಿ ಅಭಿವೃದ್ಧಿ ಮಾಡಬೇಕು. ಸರ್ಕಾರದ ಅನುದಾನ ಸದ್ಬಳಕೆಯಾಗಬೇಕು. ಅಲ್ಲದೆ, ಸ್ಥಳೀಯವಾಗಿ ಯುವಕರಿಗೆ ಕೆಲಸ ದೊರೆಯುವ ನಿಟ್ಟಿನಲ್ಲಿ ಸಣ್ಣಪುಟ್ಟ ಕೈಗಾರಿಕೆ ಸ್ಥಾಪಿಸಬೇಕು. ತನ್ಮೂಲಕ ಗ್ರಾಮೀಣಾಭಿವೃದ್ಧಿ ಮಾಡಬೇಕು ಎನ್ನುವ ಆಸೆ ನನ್ನದು.
ಪ್ರಶಾಂತ ಯಂಕಪ್ಪ ಮಾಚಕನೂರ ಸಿಕ್ಕೇರಿ ಗ್ರಾಮ ಪಂಚಾಯಿತಿ ಚುನಾವಣೆ ಸ್ಪರ್ಧಾಕಾಂಕ್ಷಿ

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…