More

    ಚುನಾವಣೆಗೆ ಸಕಲ ಮುನ್ನೆಚ್ಚರಿಕೆ ಕ್ರಮ

    ಬಾಗಲಕೋಟೆ: ಜಿಲ್ಲೆಯಲ್ಲಿ ಮೊದಲ ಹಂತದ 88 ಗ್ರಾಮ ಪಂಚಾಯಿತಿಗಳಿಗೆ ಡಿ.22 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ಮಟ್ಟಗಟ್ಟೆ ಹಾಗೂ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾ ಚುನಾವಣೆ ಅಧಿಕಾರಿ ಕೆ.ರಾಜೇಂದ್ರ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಜಿಲ್ಲೆಯ ಜಮಖಂಡಿ ಮತ್ತು ಮುಧೋಳ ತಾಲೂಕಿನಲ್ಲಿ ಬರುವ ನಾನಾ ಮತಗಟ್ಟೆಗಳಿಗೆ ಸೋಮವಾರ ಭೇಟಿ ನೀಡಿ ಮತದಾನದ ಸಿದ್ಧತೆಯನ್ನು ಪರಿಶೀಲನೆ ಮಾಡಿ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಗ್ರಾಪಂ ಸಾರ್ವತ್ರಿಕ ಚುನಾವಣೆಗೆ ಸಕಲ ರೀತಿಯಿಂದ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಮತಗಟ್ಟೆಗಳನ್ನು ಸುಸಜ್ಜಿತ ವ್ಯವಸ್ಥೆಯಲ್ಲಿ ಇಡುವುದರ ಜತೆಗೆ ಸ್ಯಾನಿಟೈಸರ್ ಮಾಡಲಾಗಿದೆ. ಮತದಾನ ಸಮಯದಲ್ಲಿ ಮತಗಟ್ಟೆಯಲ್ಲಿ ಕೊಠಡಿಯಲ್ಲಿ ಸ್ಯಾನಿಟೈಸರ್, ಮತಗಟ್ಟೆಯ 200 ಮೀಟರ್ ಅಂತರದಲ್ಲಿ ಅಭ್ಯರ್ಥಿಗಳು, ಮತದಾರರಿಗೆ ಗುರುತಿನ ಚೀಟಿ ನೀಡಲು ಪರಸ್ಪರ ಅಂತರ ಕಾಯ್ದುಕೊಂಡು ಗುಂಪುಗೂಡದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

    ಮತಗಟ್ಟೆ ಅಧಿಕಾರಿಗಳು ಖಡ್ಡಾಯವಾಗಿ ೇಸ್ ಮಾಸ್ಕ್ ಮತ್ತು ಹ್ಯಾಂಡ್‌ಗ್ಲೌಸ್ ಧರಿಸಬೇಕು. ಮತದಾರರು ಮತ ಚಲಾಯಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜತೆಗೆ ಸರತಿ ಸಾಲಿನಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ಮತ ಚಾಲಾಯಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವಂತೆ ಚುನಾವಣೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಚುನಾವಣೆ ವೀಕ್ಷಕ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳ್ಳಿ ಸೇರಿದಂತೆ ಇತರರು ಇದ್ದರು.

    ಎಡಗೈ ಹೆಬ್ಬಟ್ಟಿಗೆ ಶಾಹಿ
    ಜಿಲ್ಲೆಯಲ್ಲಿ ಡಿ.22 ರಂದು ನಡೆಯಲಿರುವ ಮೊದಲ ಹಂತದ ಹಾಗೂ ಡಿ.27 ರಂದು ನಡೆಯಲಿರುವ ಎರಡನೇ ಹಂತರದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಅಳಿಸಲಾಗದ ಶಾಯಿಯನ್ನು ಮತದಾರನ ಎಡಗೈ ಹೆಬ್ಬರಳಿಗೆ ಹಚ್ಚುವಂತೆ ರಾಜ್ಯ ಚುನಾವಣೆ ಆಯೋಗ ಸೂಚನೆ ನೀಡಿದೆ.

    ಮತಚಲಾಯಿಸಲು ಬೇಕೇ ಬೇಕು ದಾಖಲೆ
    ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಲು ಚುನಾವಣೆ ಆಯೋಗ ನೀಡಿರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಇಲ್ಲವೆ ಪಡಿತರ ಚೀಟಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಬುಕ್ ಸೇರಿದಂತೆ ಇತರ 22 ದಾಖಲೆಗಳ ಪೈಕಿ ಒಂದನ್ನಾದರೂ ಹಾಜರು ಪಡಿಸುವುದು ಕಡ್ಡಾಯ ಮಾಡಲಾಗಿದೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts