25.7 C
Bangalore
Sunday, December 15, 2019

17ರಿಂದ ಬಾಗಲಕೋಟೆಯಲ್ಲಿ ಯೋಗ ಸಪ್ತಾಹ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಬಾಗಲಕೋಟೆ: ಹರಿಹರದ ಶ್ವಾಸಯೋಗಪೀಠ, ಬಾಗಲಕೋಟೆಯ ಯೋಗ ಸಮಿತಿ, ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಸಹಯೋಗದಲ್ಲಿ ನಗರದಲ್ಲಿ ಖ್ಯಾತ ಶ್ವಾಸಗುರು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಯೋಗ ಸಪ್ತಾಹ ಮೂಲಕ ಯೋಗ ಶಿಬಿರ, ಉಪನ್ಯಾಸ ಕಾರ್ಯಕ್ರಮ ನ. 17 ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಪ್ರತಿದಿನ ಬೆಳಗ್ಗೆ 5.30 ರಿಂದ 7.30 ರವರೆಗೆ ನಗರದ ಬಿವಿವಿ ಸಂಘದ ಕಾಲೇಜು ಮೈದಾನದಲ್ಲಿ ಯೋಗ ಶಿಬಿರ ಜರುಗಲಿದೆ. ಪ್ರವೇಶ ಉಚಿತವಿದ್ದು, ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿದಿನ ಯೋಗ ಶಿಬಿರದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ನವ ನಗರದ ಸೆಕ್ಟರ್ ನಂ.63, ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು, ನವನಗರದ ಎಲ್‌ಐಸಿ ಸರ್ಕಲ್ ಬಳಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್ ವ್ಯವಸ್ಥೆ ಕುರಿತು ಕೆ.ಎಸ್.ಆರ್.ಟಿ.ಸಿ. ಡಿಸಿಯವರಿಗೆ ಪತ್ರ ಬರೆಯಲಾಗಿದೆ. ಸಮಯಕ್ಕೆ ಸರಿಯಾಗಿ ಸಾರ್ವಜನಿಕರು ಆಗಮಿಸಬೇಕು. ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಎನ್‌ಸಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವ್ಯವಸ್ಥೆಯನ್ನು ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಚರಂತಿಮಠದ ಪ್ರಭುಸ್ವಾಮೀಜಿ, ಶಿರೂರ ಮಹಾಂತ ತೀರ್ಥದ ಡಾ. ಬಸವಲಿಂಗ ಸ್ವಾಮೀಜಿ ನೇತೃತ್ವ ವಹಿಸುವರು. ಯೋಗ ಸಮಿತಿಯ ಗೌರವಾಧ್ಯಕ್ಷ ಶಾಸಕ ವೀರಣ್ಣ ಚರಂತಿಮಠ, ಯೋಗ ಸಮಿತಿ ಉಪ ಗೌರವಾಧ್ಯಕ್ಷ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ವಿ.ಪ. ಸದಸ್ಯ ಹನುಮಂತ ನಿರಾಣಿ, ಮಾಜಿ ಶಾಸಕ ಪಿ.ಎಚ್. ಪೂಜಾರ, ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಸೇರಿ ಮತ್ತಿತರ ನೇತೃತ್ವದಲ್ಲಿ ಕಾರ್ಯಕ್ರಮದ ಸಮಿತಿ ರಚಿಸಲಾಗಿದೆ ಎಂದರು.

10 ಸಾವಿರಕ್ಕೂ ಹೆಚ್ಚು ಜನರು ಯೋಗ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಯೋಗ ಸಮಿತಿ ಸಂಚಾಲಕರಾದ ಸಿದ್ದಣ್ಣ ಹಂಪನಗೌಡ, ಮಲ್ಲೇಶಪ್ಪ ಜಿಗಜಿನ್ನಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ನಿತ್ಯ ಉಪನ್ಯಾಸ
ಪ್ರತಿದಿನ ಸಂಜೆ 6.30 ರಿಂದ 7.30 ವರೆಗೆ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ನ. 17 ರಂದು ಡಾ.ಜಿ.ಬಿ. ಸತ್ತೂರ ಸ್ಥೂಲಕಾಯ ಮತ್ತು ಮಧುಮೇಹ ತಡೆಗಟ್ಟುವ ಹೆಜ್ಜೆಗಳು ಕುರಿತು ಉಪನ್ಯಾಸ ನೀಡಲಿದ್ದಾರೆ. ನ. 18ರಂದು ವಿಜಯಪುರ ನರ ರೋಗ ತಜ್ಞ ಡಾ.ಪ್ರಶಾಂತ ಕಟಕೋಳ ‘ಆಧುನಿಕ ಜೀವನ ಶೈಲಿಯಿಂದ ನಮ್ಮ ಆರೋಗ್ಯದ ಮೇಲೆ ಆಗುವ ಪರಿಣಾಮಗಳ’ ಕುರಿತು, ನ.19 ರಂದು ‘ಆರೋಗ್ಯ ಮಾರಾಟಕ್ಕಿಲ್ಲ’ ವಿಷಯ ಕುರಿತು ಬೆಳಗಾವಿಯ ಕೆಎಲ್‌ಇ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ನ.20 ರಂದು ಡಾ.ಶಂಕರ ಬಿಜಾಪುರ, ಡಾ.ಸುನೀತಾ ಕೆರೂಡಿ, ನ. 21 ರಂದು ಡಾ.ಸಂಗಮೇಶ ಕಲಹಾಳ, ನ.22 ರಂದು ಡಾ.ಗಂಗಾಧರ ವರ್ಮಾ, ನ. 23 ರಂದು ಡಾ.ಶಂಭು ಬಳಿಗಾರ ಅವರು ಆರೋಗ್ಯ ಸಪ್ತಾಹದಲ್ಲಿ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

ಒತ್ತಡದ ಬದುಕು, ಸತ್ವವಿಲ್ಲದ ಆಹಾರ, ಬದಲಾಗುತ್ತಿರುವ ಜೀವನ ಶೈಲಿ ಪರಿಣಾಮ ಆರೋಗ್ಯ ಸ್ಥಿತಿ ತುಂಬಾ ಸೂಕ್ಷ್ಮವಾಗುತ್ತಿದೆ. ಇಂತಹ ಕಲುಷಿತ ವಾತಾವರಣದಲ್ಲಿ ಯೋಗ ಮಾತ್ರ ನಮ್ಮನ್ನು ಕಾಪಾಡಬಲ್ಲದು. ಹೀಗಾಗಿ ನಗರದಲ್ಲಿ ಯೋಗ ಸಮಿತಿ ರಚಿಸಿ ಬಾಗಲಕೋಟೆ ಮತ್ತು ಸುತ್ತಮುತ್ತಲಿನ ಜನರ ಆರೋಗ್ಯಕ್ಕಾಗಿ ಈ ಸಪ್ತಾಹವನ್ನು ಆಯೋಜಿಸಲಾಗಿದೆ.
– ವೀರಣ್ಣ ಚರಂತಿಮಠ ಶಾಸಕರು ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷರು

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...