20.4 C
Bangalore
Monday, December 9, 2019

ಸ್ಮಶಾನ ನಿವೇಶನ ಬೇಡಿಕೆ ಪಟ್ಟಿ ಮಾಡಿ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಬಾಗಲಕೋಟೆ: ಜಿಲ್ಲೆಯಲ್ಲಿ ನಿವೇಶನರಹಿತ ಅಲ್ಪಸಂಖ್ಯಾತರ ಬಗ್ಗೆ ಗ್ರಾಮ ಪಂಚಾಯಿತಿವಾರು ಪಟ್ಟಿ ಮಾಡಬೇಕು. ಸ್ಮಶಾನಕ್ಕೆ ಅಗತ್ಯ ಇರುವ ಜಾಗದ ಬೇಡಿಕೆ ಬಗ್ಗೆ ಪಟ್ಟಿ ಮಾಡಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನಮಂತ್ರಿಗಳ ನೂತನ 15 ಅಂಶಗಳ ಕಾರ್ಯಕ್ರಮಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂನ್ ತಿಂಗಳಿಂದ ಅಕ್ಟೋಬರ್‌ವರೆಗೆ ಜಿಲ್ಲಾ ಪಂಚಾಯಿತಿ ಸಂಜೀವಿನಿ, ಎನ್‌ಆರ್‌ಎಲ್‌ಎಂ ಹಾಗೂ ರಾಜೀವ್ ಗಾಂಧಿ ಚೈತನ್ಯ ಯೋಜನೆ, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಹಕಾರ ಇಲಾಖೆಯವರು ಶೇ.100 ರಷ್ಟು ಭೌತಿಕ ಪ್ರಗತಿ ಸಾಧಿಸಿದರೆ ಉಳಿದವರು ಶೇ.50ರಷ್ಟು ಮಾತ್ರ ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳಬೇಕು ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಇಲಾಖೆವಾರು ಮೀಸಲಿಟ್ಟಿರುವ ಶೇ.15 ರಷ್ಟು ಅನುದಾನವನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುರುಕಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ಇಲಾಖೆಗೆ ಸಂಬಂಧಿಸಿದ ಕೇಸ್ ವರ್ಕರ್‌ಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಬೇಕು. ಯಾವುದೇ ರೀತಿಯಲ್ಲಿ ಕಚೇರಿಯ ಕಡತಗಳ ಕೆಲಸ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4344 ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಪಡೆಯುತ್ತಿದ್ದಾರೆಂದು ಇಲಾಖೆ ಉಪನಿರ್ದೇಶಕರು ತಿಳಿಸಿದರು. ಪ್ರಸಕ್ತ ಸಾಲಿಗೆ 57 ಸೇರಿ ಒಟ್ಟು ಇಲ್ಲಿಯವರೆಗೆ 311ಅಲ್ಪಸಂಖ್ಯಾತ ಅಭ್ಯರ್ಥಿಗಳು ಉದ್ಯೋಗಕ್ಕೆ ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಶಿಕ್ಷಣ, ಮನೆ ಹಾಗೂ ಉದ್ಯೋಗಕ್ಕೆ ಸಾಲ ವಿತರಿಸಲಾಗಿದೆ ಎಂದು ಜಿಲ್ಲಾ ಅಗ್ರಣೀಯ ಬ್ಯಾಂಕ್‌ನ ಪ್ರತಿನಿಧಿಗಳು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಯೋಜನಾ ನಿರ್ದೇಶಕ ವಿ.ಎಸ್.ಹಿರೇಮಠ, ಅಲ್ಪಸಂಖ್ಯಾತರ ಇಲಾಖೆ ಉಪನಿರ್ದೇಶಕ ಎಂ.ಎನ್.ಮೇಲಿನಮನಿ, ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಬಿ.ಕೊಂಗವಾಡ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಭುರಾಜ ಹಿರೇಮಠ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ದೇವೇಂದ್ರ ಧನಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರ ಉಪನಿರ್ದೇಶಕ ಎ.ಕೆ.ಬಸಣ್ಣವರ ಸೇರಿ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...