23.2 C
Bangalore
Saturday, December 14, 2019

ಕೋಟೆನಾಡಲ್ಲಿ ಇಂದಿನಿಂದ ತೋಟಗಾರಿಕೆ ಮೇಳ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಸಂತೋಷ ದೇಶಪಾಂಡೆ ಬಾಗಲಕೋಟೆ

ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಉದ್ಯಾನದಲ್ಲಿ ಡಿ.23ರಿಂದ ಮೂರು ದಿನಗಳ 7ನೇ ತೋಟಗಾರಿಕೆ ಮೇಳ ಆಯೋಜಿಸಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ತೋಟಗಾರಿಕೆಯಲ್ಲಿ ಬಳಸಬಹುದಾದ ಯಂತ್ರೋಪಕರಣ ಹಾಗೂ ಸಲಕರಣೆಗಳ ಪ್ರದರ್ಶನ, ಹೈಟೆಕ್ ತೋಟಗಾರಿಕೆ ವಿಧಾನ ಪ್ರದರ್ಶನ, ರೈತರು ಅಭಿವೃದ್ಧಿಪಡಿಸಿದ ನೂತನ ತಾಂತ್ರಿಕ ಅವಿಷ್ಕಾರಗಳ ಪ್ರದರ್ಶನ, ಫಲ ಪುಷ್ಪ, ತರಕಾರಿಗಳ ಪ್ರದರ್ಶನ, ವಿಶೇಷವಾಗಿ 29 ತಾಕುಗಳ ಪ್ರಾತ್ಯಕ್ಷಿಕೆ, ಇಸ್ರೇಲ್ ಮಾದರಿ ಕೃಷಿ, ಹೊಸ ಕೃಷಿ ಪದ್ಧತಿ, ನೂತನ ತರಕಾರಿ ಬೆಳೆಗಳ ಪ್ರದರ್ಶನ, ತಾಂತ್ರಿಕ ಸಲಹಾ ಕೇಂದ್ರ, ಗುಣಮಟ್ಟದ ಸಸಿ, ಬೀಜ, ಅಂಗಾಂಶ ಕೃಷಿಯಿಂದ ಅಭಿವೃದ್ಧಿಪಡಿಸಿದ ಸಸಿಗಳ ಪ್ರದರ್ಶನ ಮತ್ತು ಮಾರಾಟ, ವಿವಿ ಅಭಿವೃದ್ಧಿಪಡಿಸಿದ 15ಕ್ಕೂ ಹೆಚ್ಚು ಹೊಸ ತಳಿಗಳ ಪರಿಚಯ, ವಿಚಾರ ಸಂಕಿರಣಗಳು ನಡೆಯಲಿವೆ.

ಪ್ರಶಸ್ತಿ ಪ್ರದಾನ: ಪಕ್ಕದ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳು ನಾಡು ಸೇರಿ ದೇಶದ ವಿವಿಧ ರಾಜ್ಯಗಳಿಂದ ರೈತರು, ಪ್ರಗತಿ ಪರ ಕೃಷಿಕರು, ಸಂಶೋಧಕರು, ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ಅಂದಾಜು 3 ರಿಂದ 4 ಲಕ್ಷ ಜನರ ಮೇಳಕ್ಕೆ ಆಗಮಿಸುವ ನಿರೀಕ್ಷೆ ಇದೆ. ಮೊದಲ ದಿನ ರೈತ ದಿನಾಚರಣೆ ಅಂಗವಾಗಿ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

500ಕ್ಕೂ ಹೆಚ್ಚು ಮಳಿಗೆ: ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿದ್ದು, 140 ಹೈಟೆಕ್, 160 ಸಾಮಾನ್ಯ, 30 ಯಂತ್ರೋಪಕರಣ, ವಿವಿಯಿಂದ ಅಭಿವೃದ್ಧಿಪಡಿಸಿ ತಂತ್ರಜ್ಞಾನಗಳ ಪ್ರದರ್ಶನಕ್ಕೆ 40 ಮಳಿಗೆ ಮೀಸಲಿಡಲಾಗಿದೆ. ತೋಟಗಾರಿಕೆ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಾರ್ತಾ ಇಲಾಖೆ ಸೇರಿ ಸರ್ಕಾರದ ವಿವಿಧ ಇಲಾಖೆಗಳ 20 ಮಳಿಗೆಗಳು ಸೇರಿ 500ಕ್ಕೂ ಹೆಚ್ಚು ಮಳಿಗೆ ಸ್ಥಾಪಿಸಲಾಗುತ್ತದೆ. 160100 ಮುಖ್ಯವೇದಿಕೆ ಸಿದ್ಧಪಡಿಸಲಾಗಿದೆ. 1500 ಆಸನ ವ್ಯವಸ್ಥೆ ಮಾಡಲಾಗಿದೆ.

ಉಚಿತ ಬಸ್ ಸೇವೆ: ತೋವಿವಿಯ ಎರಡು ಬಸ್​ಗಳು ನವನಗರ ಬಸ್ ನಿಲ್ದಾಣದಿಂದ ಮೇಳ ನಡೆಯುವ ಮೂರು ದಿನ ಉಚಿತ ಸೇವೆ ಒದಗಿಸಲಿವೆ. ಕೆಎಸ್​ಆರ್​ಟಿಸಿ ಬಸ್​ಗಳು ಸಹ ಸಂಚರಿಸಲಿದ್ದು, ಟಿಕೆಟ್ ದರ ನಿಗದಿ ಮಾಡಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ಮೂರು ದಿನಗಳ ಮೇಳದಲ್ಲಿ ಜಾನುವಾರು, ಶ್ವಾನ ಹಾಗೂ ಕುರಿ, ಮೇಕೆ ಪ್ರದರ್ಶನ ಜರುಗಲಿದೆ. ಮೇಳಕ್ಕೆ ಆಗಮಿಸುವ ರೈತರಿಗೆ ರಿಯಾಯಿತಿ ದರದಲ್ಲಿ ಊಟ-ಉಪಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ಜತೆಗೆ ಪ್ರತಿದಿನ ಸಂಜೆ ತೋಟಗಾರಿಕೆ ವಿವಿಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ. ವಿವಿಧ ವಿಚಾರ ಸಂಕಿರಣ, ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಮೇಳದಲ್ಲಿಂದು:ತೋಟಗಾರಿಕೆ ಕ್ಷೇತ್ರದಲ್ಲಿ ಸಾಧನೆ ಗೈದ ವಿವಿ ವ್ಯಾಪ್ತಿಯ 23 ಜಿಲ್ಲೆಗಳ ಶ್ರೇಷ್ಠ ರೈತ/ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ. ಅತಿಥಿಗಳು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ದಿ, ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು. ಅಧ್ಯಕ್ಷತೆ: ಶಾಸಕ ವೀರಣ್ಣ ಚರಂತಿಮಠ.

ರೈತರ ಆರ್ಥಿಕ ಸುಸ್ಥಿರತೆಗಾಗಿ ತೋಟಗಾರಿಕೆ ಮಾರುಕಟ್ಟೆ ಮತ್ತು ಅಂತರ್ಜಾಲ ವಹಿವಾಟು ಮತ್ತು ರಫ್ತು ವ್ಯವಹಾರ ಪ್ರಥಮ ಗೋಷ್ಠಿ.ಸಾನ್ನಿಧ್ಯ: ನಿಡಸೋಶಿಯ ಸಿದ್ಧ ಸಂಸ್ಥಾನಮಠದ ಶಿವಲಿಂಗೇಶ್ವರ ಸ್ವಾಮೀಜಿ. ಅಧ್ಯಕ್ಷತೆ: ವಿಶ್ರಾಂತ ಕುಲಪತಿ ಡಾ.ಎಸ್.ಬಿ.ದಂಡಿನ. ವಿಷಯ ಮಂಡನೆ: ವಿಜ್ಞಾನಿಗಳಾದ ಜಿ.ಎಸ್.ಸೊನ್ನದ, ಡಾ.ಎಂ.ಜಿ.ಕೆರುಟಗಿ, ಶ್ರೀಪಾದ ವಿಶ್ವೇಶ್ವರ, ಡಾ.ಸಚಿನ್ ನಂದಿಮಠ. ಸಮಯ: ಮಧ್ಯಾಹ್ನ 2 ರಿಂದ 3 ಗಂಟೆ.

ಎರಡನೇ ಗೋಷ್ಠಿ ವಿಷಯ: ಕೃಷಿ, ತೋಟಗಾರಿಕೆಯಲ್ಲಿ ಉತ್ಪಾದನೆ ಹೆಚ್ಚಿಸಲು ಡ್ರೋಣ್​ಗಳ ಬಳಕೆ. ಸಾನ್ನಿಧ್ಯ: ಶಿರೂರ ಮಠದ ಸಿದ್ಧಲಿಂಗ ಸ್ವಾಮೀಜಿ. ಅಧ್ಯಕ್ಷತೆ: ಶಿವಮೊಗ್ಗ ಕೃಷಿ, ತೋಟಗಾರಿಕಾ ವಿವಿ ಕುಲಪತಿ ಡಾ.ಮಂಜುನಾಥ ನಾಯ್ಕ. ಸಮಯ: ಮಧ್ಯಾಹ್ನ 3 ಗಂಟೆ. 3ನೇ ಗೋಷ್ಠಿ: ಇಸ್ರೇಲ್ ತಂತ್ರಜ್ಞಾನ ಅಳವಡಿಕೆಯ ಸಾಧ್ಯಾಸಾಧ್ಯತೆಗಳು. ಅಧ್ಯಕ್ಷತೆ: ಧಾರವಾಡ ಕೃಷಿ ಕುಲಪತಿ ಡಾ.ಎಂ.ಬಿ. ಚಟ್ಟಿ. ವಿಷಯ ಮಂಡನೆ: ವಿವಿಧ ವಿಶ್ವವಿದ್ಯಾಲಯಗಳ ವಿಷಯ ತಜ್ಞರು ಹಾಗೂ ಪ್ರಗತಿಪರ ರೈತರು. ಸಮಯ: 4 ಗಂಟೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...