More

    ಅಕ್ರಮ ಗಣಿಕಾರಿಕೆಯಿಂದ ನಲುಗಿದ ಕೆರೆ

    ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ 5 ಗ್ರಾಮಗಳಿಗೆ ನೀರಾವರಿ ಕಲ್ಪಿಸಬೇಕಿದ್ದ ಚಿತ್ತವಾಡಗಿ (ಕಡೂರ) ಕೆರೆ ಅಕ್ರಮ ಗಣಿಗಾರಿಕೆಯಿಂದ ನಲುಗಿ ಹೋಗಿದೆ. ಕೆರೆ ಉಳಿಸಲು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತ ಬಂದರೂ ಅಧಿಕಾರಿಗಳು ದಿಟ್ಟ ಕ್ರಮ ತೆಗೆದುಕೊಂಡಿಲ್ಲ ಎಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಜಿಲ್ಲಾ ಘಟಕ ಅಧ್ಯಕ್ಷ ಬಸವರಾಜ ಹೊಸಮನಿ, ನೀರು ಬಳಕೆದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಶರಣಪ್ಪ ಅರಸಿಬೀಡಿ ಎಂದು ಆರೋಪಿಸಿದರು.

    ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಈ ಕೆರೆ ಇದೆ. ಜಿಲ್ಲೆಯ ಹುನಗುಂದ, ಇಳಕಲ್ಲ ತಾಲೂಕಿನ 5 ಗ್ರಾಮಗಳ ಸಾವಿರಾರು ಎಕರೆಗೆ ನೀರಾವರಿ ಕಲ್ಪಿಸಬೇಕಿತ್ತು. ಆದರೆ, ಅಕ್ರಮ ಗಣಿಗಾರಿಕೆಯಿಂದ ಕೆರೆ ಸಂಪೂರ್ಣ ಹಾಳಾಗಿದೆ. 2006 ದಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಿರ್ಲಕ್ಷೃ ಧೋರಣೆ ಅನುಸರಿಸುತ್ತಿದೆ ಎಂದು ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ದೂರಿದರು.

    ಕೆರೆಯ ಅಕ್ಕಪಕ್ಕ ಗ್ರಾನೈಟ್ ಕಲ್ಲು ಗಣಿಗಾರಿಕೆ ಪರವಾನಗಿ ಪಡೆದಿರುವ ಕೆಲವರು ಕೆರೆ ಮತ್ತು ಕಾಲುವೆಗಳ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ಜತೆಗೆ ಕೆರೆ ಸಮೀಪ ಯರಿಗೋನಾಳ ಮಾರ್ಗದ ಕಡೂರ ಗ್ರಾಮದಿಂದ ಕಲ್ಲುಗೋನಾಳ ಗ್ರಾಮಕ್ಕೆ ತೆರಳುವ ಲೋಕೋಪಯೋಗಿ ಇಲಾಖೆಯ ರಸ್ತೆಯಲ್ಲಿ ಗಣಿಗಾರಿಕೆ ನಡೆಸಲಾಗಿದೆ. ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಶಿವಲಿಂಗಪ್ಪ ಬೂದಿಹಾಳ, ವೈ.ಡಿ. ಮಾದರ, ದ್ಯಾಮಣ್ಣ ದೊಡಮನಿ ಸುದ್ದಿಗೋಷ್ಠಿಯಲ್ಲಿ ಇದ್ದರು.





    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts