More

    14 ರಂದು ಸಿದ್ದಶ್ರೀ ಉತ್ಸವ ಆರಂಭ

    ಬಾಗಲಕೋಟೆ: ನಿರಂತರ ದಾಸೋಹ ಮತ್ತು ಕಲಾ ಪೋಷಕರ ಮಠವಾಗಿರುವ ಜಿಲ್ಲೆಯ ಇಳಕಲ್ಲ ತಾಲೂಕಿನ ಸಿದ್ದನಕೊಳ್ಳದ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಜ.14 ರಿಂದ ಮೂರು ದಿನ ನಡೆಯಲಿದೆ ಎಂದು ಶ್ರೀಮಠದ ಪೀಠಾಧಿಪತಿ ಶಿವುಕುಮಾರ ಸ್ವಾಮೀಜಿ ಹೇಳಿದರು.

    ಲೋಕಕಲ್ಯಾಣಕ್ಕಾಗಿ ಜೀವಂತ ಸಮಾಧಿಯಾಗಿರುವ ಸಿದ್ದನಕೊಳ್ಳದ ಪವಾಡ ಪುರುಷ ಸಿದ್ದಪ್ಪಜ್ಜನವರ ಗದ್ದುಗೆಗೆ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮ ಮೂರು ದಿನಗಳ ಕಾಲ ಜರುಗಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಜ.14 ರಂದು ಸಂಜೆ 6 ಗಂಟೆಗೆ ಸಿದ್ದಶ್ರೀ ಸಾಂಸ್ಕೃತಿಕ ಉತ್ಸವ ಜರುಗಲಿದ್ದು, ಗುಳೇದಗುಡ್ಡ ಮರಡಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ, ಮುರನಾಳ ಮಳಿಯಪ್ಪಜ್ಜ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕರಾದ ಗೌರಮ್ಮ ಕಾಶಪ್ಪನವರ, ವಿಜಯಾನಂದ ಕಾಶಪ್ಪನವರ ಭಾಗವಹಿಸಲಿದ್ದಾರೆ. ಬಾಲಿವುಡ್ ಹಿನ್ನೆಲೆ ಗಾಯಕಿ ಮಧುಶ್ರೀ ಅವರಿಗೆ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

    ಜ.15 ರಂದು ಸಂಜೆ 6 ಗಂಟೆಗೆ ಚಲನಚಿತ್ರೋತ್ಸವ ಮತ್ತು ಸಾಂಸ್ಕೃತಿಕ ಉತ್ಸವ ಜರುಗಲಿದೆ. ಮೈಸೂರಿನ ವಿಜಯಮಹಾಂತ ಸ್ವಾಮೀಜಿ, ಚಳಗೇರಿಯ ವೀರಸಂಗಮೇಶ್ವರ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ರೋಣ ಶಾಸಕ ಕಳಕಪ್ಪ ಬಂಡಿ, ಸಂಸದ ಪಿ.ಸಿ.ಗದ್ದಿಗೌಡರ, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಉಪಸ್ಥಿತರಿರುವರು. ವಿವಿಧ ಚಲನಚಿತ್ರ ಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ ಎಂದು ತಿಳಿಸಿದರು.

    ಜ.16 ರಂದು ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಮೂರು ದಿನ ನಡೆಯುವ ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಹುನಗುಂದ ಘಟಕದ ಅಧ್ಯಕ್ಷ ಮಹಾಂತೇಶ ಹಳ್ಳೂರ, ಮುಖಂಡರಾದ ಮಹೇಶ ಹಿರೇಮಠ, ನಬಿ ನದಾಫ, ಸಾಯಿರಾಮ ನಾಯಕ, ಸಂಗಮೇಶ ಹುದ್ದಾರ ಸುದ್ದಿಗೋಷ್ಠಿಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts