More

    ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ

    ಬಾಗಲಕೋಟೆ: ಜಿಲ್ಲಾದ್ಯಂತ ನಾಲ್ಕು ದಿನ ಹಮ್ಮಿಕೊಂಡಿರುವ ಇಂದ್ರಧನುಷ ವಿವಿಧ ಲಸಿಕೆ ವಿತರಣೆ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಾಯಕ್ಕ ಮೇಟಿ ಸೋಮವಾರ ಚಾಲನೆ ನೀಡಿದರು.

    ನಗರದ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಲಸಿಕೆಯನ್ನು ಪಡೆಯದ ಮಕ್ಕಳು ಮತ್ತು ಗರ್ಭಿಣಿಯರು ತಪ್ಪದೆ ಲಸಿಕೆ ಪಡೆದುಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು, ಪೋಷಕರು ಜಾಗೃತಿ ವಹಿಸಬೇಕು ಎಂದರು.

    ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಮಾತನಾಡಿ, ಜಿಲ್ಲೆಯಲ್ಲಿ 357 ಜನ ಮಕ್ಕಳು ಹಾಗೂ 76 ಗರ್ಭಿಣಿ ತಾಯಂದಿರು ವಿವಿಧ ಲಸಿಕೆಗಳಿಂದ ಬಿಟ್ಟು ಹೋಗಿದ್ದು, ಅವರಿಗೆ ೆ.22, 23, 24 ಹಾಗೂ 26 ರಂದು ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಕಲಾಗುತ್ತಿದೆ ಎಂದು ತಿಳಿಸಿದರು.

    ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಸದಸ್ಯೆ ಲಕ್ಷ್ಮೀ ಚವ್ಹಾಣ್, ಜಿಪಂ ಸಿಇಒ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, 50 ಹಾಸಿಗೆಗಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಇತರರು ಉಪಸ್ಥಿತರಿದ್ದರು.

    ಇಂದ್ರಧನುಷ ಕಾರ್ಯಕ್ರಮದಡಿ ಮಕ್ಕಳಿಗಾಗಿ ನೀಡಲಾಗುತ್ತಿರುವ ಪೋಲಿಯೋ, ಬಿಸಿಜಿ, ಡಿಪಿಟಿ ಹಾಗೂ ಗರ್ಭಿಣಿಯರಿಗಾಗಿ ನೀಡುತ್ತಿರುವ ಟಿಟಿ ಲಸಿಕೆಗಳನ್ನು ತಪ್ಪದೆ ಪಡೆದುಕೊಳ್ಳಬೇಕು. ಸಾರ್ವಜನಿಕರು ನಿರ್ಲಕ್ಷೃ ವಹಿಸಬಾರದು.
    ವೀರಣ್ಣ ಚರಂತಿಮಠ ಶಾಸಕ ಬಾಗಲಕೋಟೆ



    ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts