20.4 C
Bengaluru
Sunday, January 19, 2020

ಸ್ವಚ್ಛತೆಗೆ ಪೊರಕೆ ಹಿಡಿದ ಸೈನಿಕರು

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬಾಗಲಕೋಟೆ: ಈ ಊರಲ್ಲಿ ಹೆಜ್ಜೆ ಇಟ್ಟಲ್ಲೆಲ್ಲ ಗಲೀಜು. ಚರಂಡಿ ವ್ಯವಸ್ಥೆ ಕೇಳಲೇ ಬೇಡಿ. ರಸ್ತೆ ಮಧ್ಯೆ ಹರಿಯುವ ಕೊಳಚೆ ನೀರು. ಕೊಳಚೆಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡಿರುವ ಮಕ್ಕಳು, ವೃದ್ಧರು ಸಾಕಷ್ಟು. ಅನೈರ್ಮಲ್ಯದಿಂದ ಸಾಂಕ್ರಾಮಿಕ ಕಾಯಿಲೆ ಭೀತಿ.
ಇದು ಜಿಲ್ಲೆಯ ಬಾದಾಮಿ ತಾಲೂಕಿನ ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸೂಳಿಕೇರಿ ಗ್ರಾಮದ ಚಿತ್ರಣ.

ಇಷ್ಟೆಲ್ಲಾ ಸಮಸ್ಯೆಯಿದ್ದರೂ ಅಲ್ಲಿನ ಗ್ರಾಮ ಪಂಚಾಯಿತಿ ಈ ಬಗ್ಗೆ ಗಮನ ಹರಿಸಿಲ್ಲ. ಗ್ರಾಮಸ್ಥರು ಮಾಡಿಕೊಂಡ ಮನವಿಗೂ ಸ್ಪಂದಿಸಿಲ್ಲ. ಇದೆಲ್ಲ ನೋಡಿ, ಕೇಳಿ ಬೇಸತ್ತ ಸೈನಿಕರು, ಮಾಜಿ ಸೈನಿಕರು ಸೇರಿ ಗ್ರಾಮ ಸ್ವಚ್ಛತೆಗೆ ಮುಂದಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ಇದೀಗ ಊರಲ್ಲಿ ಹನುಮಂತ ದೇವರ ಜಾತ್ರೆ ಆರಂಭಗೊಂಡಿದ್ದು, ಶುಕ್ರವಾರ ಇಡೀ ದಿನ ಸೈನಿಕರು ಗ್ರಾಮ ಸ್ವಚ್ಛತೆ ಮಾಡಿದರು. ಕಂಟಿಗಳನ್ನು ಕಡಿದು ಹಾಕಿ, ರಸ್ತೆ ಮಧ್ಯೆ ರಾರಾಜಿಸುತ್ತಿದ್ದ ಕೊಳಚೆಯನ್ನು ಎತ್ತಿಹಾಕಿ, ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ಕೈಗೊಂಡರು. ವರ್ಷ ಪೂರ್ತಿ ದೇಶದ ಗಡಿ ಕಾಯುವ ಇಲ್ಲಿನ ಸೈನಿಕರು ಊರಿಗೆ ಬಂದಾಗ ಪೌರ ಕಾರ್ಮಿಕರಾಗಿ ಸ್ವಚ್ಛತಾ ಕಾಯಕದಲ್ಲಿ ತೊಡಗಿಸಿಕೊಳ್ಳುವುದು ಅಲ್ಲಿನ ಜನರ ಮೆಚ್ಚುಗೆಗೆ ಕಾರಣವಾಗಿದೆ.

ಜಾತ್ರೆಗೆ ಊರಿಗೆ ಬರುವ ಸೈನಿಕರು
ಗ್ರಾಮದಲ್ಲಿ ಹಾಲಿ ಮತ್ತು ಮಾಜಿ ಸೇರಿದಂತೆ ಒಟ್ಟು 78 ಜನ ಸೈನಿಕರಿದ್ದು, ಹಾಲಿ ಸೈನಿಕರು ವರ್ಷಕ್ಕೊಮ್ಮೆ ಹನುಮಂತ ದೇವರ ಜಾತ್ರೆಗೆ ತಪ್ಪದೆ ಬರುತ್ತಾರೆ. ಎಲ್ಲರೂ ಸೇರಿಕೊಂಡು ಪ್ರತಿ ವರ್ಷವೂ ಒಂದು ದಿನ ಗ್ರಾಮ ಸ್ವಚ್ಛತೆಗೆ ಮುಂದಾಗುವುದು ವಿಶೇಷ. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಇವರಿಗೆಲ್ಲ ಪ್ರೇರಣೆಯಾಗಿದ್ದು, ಗ್ರಾಮಸ್ಥರಲ್ಲಿಯೂ ಜಾಗೃತಿ ಮೂಡಿಸುತ್ತಾರೆ. ಇವರನ್ನು ನೋಡಿಯಾದರೂ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಪಾಠ ಕಲಿಯದಿರುವುದು ವಿಪರ್ಯಾಸ.

ಸೂಳಿಕೇರಿ ಗ್ರಾಮದಲ್ಲಿ ಪಂಚಾಯಿತಿ ಇದ್ದೂ ಇಲ್ಲದಂತಿದೆ. ಊರಿನಲ್ಲಿ ಯಾವುದೇ ಕೆಲಸ ಕಾರ್ಯಗಳು ಆಗಲ್ಲ. ಹಸಿಸುಳ್ಳು ಹೇಳುತ್ತಲೆ ಕಾಲಹರಣ ಮಾಡುತ್ತಾರೆ. ಈ ಬಗ್ಗೆ ಪಿಡಿಒಗೆ ಹೇಳಿ ಹೇಳಿ ಸಾಕಾಗಿದೆ. ಊರು ಗಬ್ಬೆದ್ದು ನಾರುತ್ತಿದ್ದರೂ ಸ್ವಚ್ಛತೆಗೆ ಮುಂದಾಗಿರಲಿಲ್ಲ. ಈಗ ಯೋಧರು, ಮಾಜಿ ಯೋಧರು ಗ್ರಾಮ ಸ್ವಚ್ಛತೆಗೆ ಮುಂದಾಗಿರುವುದು ಸಂತಸ ತಂದಿದೆ.
– ರತ್ನವ್ವ ಕಿತ್ತಲಿ ಗ್ರಾಮಸ್ಥೆ

ರಸ್ತೆ ಮಧ್ಯೆ ಕೊಳಚೆ ನೀರು ತುಂಬಿಕೊಂಡು ಮಕ್ಕಳು, ವೃದ್ಧರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಅದನ್ನು ನೋಡಲಾಗದೆ ಸೈನಿಕರೆಲ್ಲ ಸೇರಿ ಕೊಳಚೆ ತೆಗೆಯುತ್ತಾರೆ, ಊರು ಸ್ವಚ್ಛಗೊಳಿಸಿ ಹೋಗುತ್ತಾರೆ. ಸೈನಿಕರ ಕಾರ್ಯಕ್ಕೆ ಅಭಿನಂದನೆಗಳು.
– ಸರಿತಾ ನಾಗರೆಡ್ಡಿ ಗ್ರಾಮದ ಮಹಿಳೆ

ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ನಮಗೆಲ್ಲ ಪ್ರೇರಣೆ. ಪ್ರತಿ ವರ್ಷ ಊರಿಗೆ ಬಂದಾಗ ಸ್ವಚ್ಛತಾ ಕಾರ್ಯ ಮಾಡುತ್ತ ಬಂದಿದ್ದೇವೆ. ಆದರೆ, ವರ್ಷ ಪೂರ್ತಿ ಊರು ಸ್ವಚ್ಛವಾಗಿರಬೇಕು. ಇದಕ್ಕೆ ಜನರು ಜಾಗೃತರಾಗಬೇಕು. ಪಂಚಾಯಿತಿಯವರು ಶ್ರಮಿಸಬೇಕು.
– ಸುಭಾಸ ನಾಗರಡ್ಡಿ ಸೂಳಿಕೇರಿ ಗ್ರಾಮದ ಯೋಧ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...