ಶಿವು ಉಪ್ಪಾರ ಹಂತಕರಿಗೆ ಕಠಿಣ ಶಿಕ್ಷೆ ವಿಸಿ

ಬಾಗಲಕೋಟೆ: ಗೋ ರಕ್ಷಕ ಶಿವು ಉಪ್ಪಾರ ಹಂತಕರನ್ನು ಬಂಸಿ ಕಠಿಣ ಶಿಕ್ಷೆ ವಿಸಬೇಕು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಂಘಟನೆ ಕಾರ್ಯಕರ್ತರು ಜಿಲ್ಲಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವೆಡೆ ಗೋ ರಕ್ಷಕರು ಗೋ ತಳಿಗಳ ರಕ್ಷಣೆಗೆ ಹೋರಾಟ ಮಾಡುತ್ತಿದ್ದಾರೆ. ಶಿವು ಉಪ್ಪಾರ ಕೂಡ ಗೋ ರಕ್ಷಣೆಗಾಗಿ ತನ್ನ ಪ್ರಾಣವನ್ನೇ ಅರ್ಪಿಸಿದ್ದಾನೆ. ಆತನ ಕೊಲೆಗೆ ಕಾರಣರಾದವರನ್ನು ಬಂಸಿ ಸರ್ಕಾರ ಕಠಿಣ ಶಿಕ್ಷೆ ವಿಸಬೇಕು. ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಆರ್.ಡಿ. ಬಾಬು, ಮುಖಂಡರಾದ ನಬಿ ಅನಗವಾಡಿ, ಜಾವೇದ್ ಮನಿಯಾರ, ಗಣೇಶ ಲಗಳಿ, ಶೋಭಾ ಚಿಮ್ಮಲಗಿ ಇತರರು ಇದ್ದರು.

Leave a Reply

Your email address will not be published. Required fields are marked *