20.4 C
Bengaluru
Sunday, January 19, 2020

ಪತ್ರಿಕಾ ಸ್ವಾತಂತ್ರದ ದುರ್ಬಳಕೆ ಸಲ್ಲದು

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬಾಗಲಕೋಟೆ: ಸಮಾಜದ ಓರೆ-ಕೋರೆಗಳನ್ನು ತಿದ್ದುವ, ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪತ್ರಿಕೋದ್ಯಮ ಸ್ವಾತಂತ್ರೃವನ್ನು ದುರ್ಬಳಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನೆಟ್‌ವರ್ಕ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜಕ್ಕೆ ಪತ್ರಿಕೋದ್ಯದ ಕೊಡುಗೆ ಅಪಾರವಾಗಿದ್ದು, ಅದಕ್ಕೆ ಅಪಪ್ರಚಾರವಾಗದಂತೆ ಪತ್ರಿಕೆಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ನಿಷ್ಪಕ್ಷವಾದ ವರದಿಗಾರಿಕೆಗೆ ಯಾರ ಅಭ್ಯಂತರವೂ ಇಲ್ಲ ಮತ್ತು ಕಾನೂನಿನ ಸಹಕಾರವಿರುತ್ತದೆ. ಆದರೆ ಬೆದರಿಕೆ ತಂತ್ರಗಳ ವರದಿಗಾರಿಕೆ ಅಥವಾ ಕೋಮು ಸೌಹಾರ್ದವನ್ನು ಕದಡುವ ಪ್ರಯತ್ನಗಳಿಗೆ ಸಹಕಾರ ಸಿಗುವುದಿಲ್ಲ. ಅಂತಹ ಕಾರಣಗಳಿಗೆ ದೂರು ಬಂದರೆ ತಕ್ಷಣ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಜಿಲ್ಲೆಯಲ್ಲಿ ವಾಹನಗಳ ಮೇಲೆ ಪ್ರೇಸ್ ಪದ ದುರ್ಬಳಕೆಯಾಗುತ್ತಿದ್ದು, ಇನ್ನು ಮುಂದೆ ಪ್ರೇಸ್ ಪದವನ್ನು ದ್ವಿಚಕ್ರವಾಹನ, ಕ್ರೂಸರ್, ಟಂಟಂ, ಟಾಟಾಏಸ್ ಸೇರಿದಂತೆ ಇತರೆ ವಾಹನಗಳ ಮೇಲೆ ಬಳಕೆ ಮಾಡುವಂತಿಲ್ಲ. ಅಲ್ಲದೆ ಈಗಾಗಲೇ ಬಳಕೆ ಮಾಡಿರುವ ಪ್ರೇಸ್ ಪದವನ್ನು ತಕ್ಷಣವೇ ತೆಗೆದು ಹಾಕಬೇಕು. ಪತ್ರಕರ್ತರಿಗಾಗಿಯೇ ವಿಐಪಿ, ಸಚಿವರ ಸಭೆ ಹಾಗೂ ಸಮಾರಂಭಗಳ ತುರ್ತು ಸೇವೆಗಳಲ್ಲಿ ಅಧಿಕೃತ ಪತ್ರಕರ್ತರಿಗೆ ಸಮಿತಿಯಿಂದ ಪ್ರತ್ಯೇಕ ಪ್ರೇಸ್ ಲೇಬಲ್ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಪ್ರತಿಯೊಂದು ಲೋಕಲ್ ಚಾನಲ್‌ಗಳು ಅನುಮತಿ ಇಲ್ಲದೇ ಆರಂಭಿಸುವಂತಿಲ್ಲ. ಅಲ್ಲದೆ ಸಮುದಾಯಕ್ಕೆ ಭಂಗ ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡುವಂತಿಲ್ಲ. ಅಲ್ಲದೆ ಪೋಸ್ಕೋ ಕುರಿತು ಪ್ರಕರಣಗಳ ಬಗ್ಗೆಯೂ ದೃಶ್ಯಗಳನ್ನು ಅಥವಾ ನೋಂದ ಮಕ್ಕಳ ಗುರುತು ಬಿತ್ತರಿಸುವಂತಿಲ್ಲ. ಅಲ್ಲದೆ ಯೂಟ್ಯೂಬ್ ಹಾಗೂ ವೆಬ್ ಚಾಲನೆಗಳನ್ನು ಪ್ರಾರಂಭಿಸಲು ಅನುಮತಿ ಪಡೆಯದೇ ಸಮಾಜಕ್ಕೆ, ಜನ ಸಾಮಾನ್ಯರಿಗೆ ಅಗೌರವ, ಶಾಂತಿ, ಭಂಗ ತರುವ ಸುದ್ದಿಗಳನ್ನು ಪ್ರಸಾರ ಮಾಡುವಂತಿಲ್ಲ. ಒಂದು ವೇಳೆ ಪ್ರಸಾರ ಮಾಡಿದಲ್ಲಿ ಅವುಗಳ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು. ಚಾಲನ್‌ಗಳ ಲೋಗೋ ಸಹ ಅನಧಿಕೃತವಾಗಿ ಬಳಕೆ ಮಾಡಿವಂತಿಲ್ಲ. ಜಿಲ್ಲೆಯಲ್ಲಿರುವ ನಕಲಿ ಪತ್ರಕರ್ತರ ಹಾವಳಿಯನ್ನು ತಡೆಯಲು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

ಅಲ್ಲದೆ ಪತ್ರಿಕೆಗಳ ಕ್ರಮಬದ್ದ ಪ್ರಕಟಣೆ ಪ್ರಸಾರ ಸಂಖ್ಯೆ ಬಗ್ಗೆ ಪೊಲೀಸ್, ಕಂದಾಯ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗಳನ್ನು ಒಳಗೊಂಡ ತಂಡದಿಂದ ಮುದ್ರಣಾಲಯಕ್ಕೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಸಭೆಯಲ್ಲಿ ಸೂಚಿಸಲಾಯಿತು. ಮುಂದಿನ ಸಭೆಯಲ್ಲಿ ಸಮಿತಿಯಿಂದ ಈ ಎಲ್ಲ ವಿಷಯಗಳ ಬಗ್ಗೆ ಕ್ರಮಕೈಗೊಳ್ಳುವ ಕುರಿತು ವಿವಿಧ ಮಾಧ್ಯಮ ಸಂಘದವರೊಂದಿಗೆ ಚರ್ಚಿಸಿ ಅಭಿಪ್ರಾಯ ಪಡೆದು ತಿರ್ಮಾನಿಸಲಾಗುವುದೆಂದು ಸಭೆಯಲ್ಲಿ ಸಮಿತಿ ನಿರ್ಧಾರ ಮಾಡಿತು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಸೇರಿದಂತೆ ಕೇಬಲ್ ಟಿವಿ ಜಿಲ್ಲಾ ಮಟ್ಟದ ಸಮಿತಿ ಸದಸ್ಯರು ಹಾಗೂ ವಿವಿಧ ಸ್ಥಳೀಯ ಕೇಬಲ್ ಟಿವಿ ಚಾನೆಲ್ ಮಾಲೀಕರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...