More

    ಸದಾಶಿವ ಆಯೋಗದ ವರದಿಗೆ ವಿರೋಧ

    ಬಾಗಲಕೋಟೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ವಿರೋಧಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ, ಜಿಲ್ಲಾ ಕೊರಮ ಕೊರಚ ಸಮಾಜದ ಹಿತಾಭಿವೃದ್ಧಿ ಸಂಘದ ನೇತೃತ್ವದಲ್ಲಿ ವಿವಿಧ ಸಮಾಜದ ಮುಖಂಡರು ಜಂಟಿಯಾಗಿ ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

    ಬಂಜಾರ, ಕೊರಮ, ಕೊರಚ, ಭೋವಿ ವಡ್ಡರ ಸಮಾಜದ ಮುಖಂಡರು ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

    ರಾಜ್ಯದಲ್ಲಿ ಸದಾಶಿವ ಆಯೋಗದ ವರದಿ ಏಕಪಕ್ಷಿಯಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿಸಲು ಷಡ್ಯಂತ್ರ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ. ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ. ಎಸಿ ಕೊಠಡಿಯಲ್ಲಿ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಪರಿಶಿಷ್ಟ ಜಾತಿಗಳ ವಿವಿಧ ಸಮಾಜದವರ ನಡುವೆ ಕಂದಕ ಸೃಷ್ಟಿ ಮಾಡುವ ಹುನ್ನಾರ ಅಡಗಿದೆ. ಯಾವುದೇ ಕಾರಣಕ್ಕೂ ವರದಿ ಅನುಷ್ಠಾನಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಸದಾಶಿವ ಆಯೋಗದ ವರದಿಯಿಂದ ಅನೇಕ ಪರಿಶಿಷ್ಟ ಜಾತಿ ಸಮಾಜಗಳಿಗೆ ಅನ್ಯಾಯ ಮಾಡಲಾಗಿದೆ. ಈ ಬಗ್ಗೆ ಸದನ ಹಾಗೂ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆಸಬೇಕು. ಮುಂದಿನ ದಿನಮಾನಗಳಲ್ಲಿ ಸಮುದಾಯಗಳ ನಡುವೆ ಆಗುವಂತಹ ಸಂಘರ್ಷ ತಪ್ಪಿಸಲು ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಬಾರದು. ವರದಿ ಶಿಫಾರಸ್ಸು ಮಾಡಲು ಮುಂದಾಗಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts