More

    ಸೌಹಾರ್ದತೆ ಸಂವಿಧಾನದ ಆಶಯ

    ಬಾಗಲಕೋಟೆ: ನಾವೆಲ್ಲರೂ ಇನ್ನೊಬ್ಬರ ಹಕ್ಕುಗಳಿಗೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕಲ್ಪನಾ ಕುಲಕರ್ಣಿ ಅಭಿಪ್ರಾಯಪಟ್ಟರು.

    ನಗರದ ಜಿಲ್ಲಾ ನ್ಯಾಯಾಲಯದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಮತ್ತು ಎಸ್.ಜಿ. ನಂದಿಮಠ ಕಾನೂನು ಮಹಾವಿದ್ಯಾಲಯ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸೌಹಾರ್ದತೆ ಮತ್ತು ಸಮಾಜಮುಖಿಯಾಗಿ ಬದುಕಬೇಕು ಎನ್ನುವುದು ಸಂವಿಧಾನದ ಆಶಯವಾಗಿದೆ. ಇದರಿಂದ ಕಲ್ಯಾಣ ರಾಜ್ಯವಾಗುವುದರಲ್ಲಿ ಸಂಶಯವಿಲ್ಲ ಎಂದರು

    ನಂದಿಮಠ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಚಂದ್ರಿಕಾ ಎಂ.ಪಿ. ಸಂವಿಧಾನಿಕ ಮೌಲ್ಯಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ವಿ.ಬಿ.ಚೌಕಿಮಠ, ಪ್ರಧಾನ ಕೌಟುಂಬಿಕ ನ್ಯಾಯಾಧೀಶೆ ಶೀಲಾ ಎನ್., ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ., 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ಎ.ಎಚ್. ಮೊಘಲಾನ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಆರ್.ಎಲ್.ಹೊನೊಲೆ, ಪ್ರಧಾನ ದಿವಾಣಿ ನ್ಯಾಯಾಧೀಶ ನಾಗರಾಜ ಎನ್., ವಕೀಲರ ಸಂಘದ ಕಾರ್ಯದರ್ಶಿ ಎನ್.ಎಚ್.ಶಿವನಿಚ್ಚಿ, ಸರ್ಕಾರಿ ಅಭಿಯೋಜಕ ಸುನೀಲ ಹಂಜಿ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ ಸೇರಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts