More

    ಜಿಲ್ಲೆಯಲ್ಲಿ ನೋಂದಣಿ ಪ್ರಾರಂಭ

    ಬಾಗಲಕೋಟೆ: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ. ಗುಣಮಟ್ಟದ ಕಡಲೆಯನ್ನು ಪ್ರತಿ ಕ್ವಿಂಟಾಲ್‌ಗೆ 5,100 ರೂ.ನಂತೆ ಖರೀದಿಸಲು ಜಿಲ್ಲೆಯಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಏ.30 ನೋಂದಣಿಗೆ ಕೊನೆಯ ದಿನವಾಗಿದೆ. ಖರೀದಿ ಪ್ರಕ್ರಿಯೆ ೆ.22 ರಿಂದ ಮೇ 14 ವರೆಗೆ ನಡೆಸಲಾಗುತ್ತದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎ್.ಎ.ಕ್ಯೂ. ಗುಣಮಟ್ಟದ ಕಡಲೆ ಮಾತ್ರ ಖರೀದಿಸಲಾಗುತ್ತಿದೆ ಎಂದರು.

    ಸರ್ಕಾರವು ಕೃಷಿ ಇಲಾಖೆಯಿಂದ ನೀಡಿರುವ ರೈತರ ನೋಂದಣಿ ಮತ್ತು ಏಕೀಕೃತ ಲಾನುಭವಿ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ಗುರುತಿನ ಸಂಖ್ಯೆ ಮೂಲಕ ನೋಂದಾಯಿತ ರೈತರಿಂದ ಮಾತ್ರ ಖರೀದಿಸಲಾಗುತ್ತಿದೆ. ಈ ಗುರುತಿನ ಸಂಖ್ಯೆ ಹೊರತುಪಡಿಸಿ ಬೇರೆ ಯಾವುದೇ ದಾಖಲೆಗಳು ತರುವುದು ಅವಶ್ಯವಿರುವುದಿಲ್ಲ. ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ನೋಂದಣಿ ಹಾಗೂ ಖರೀದಿಗೆ ಜಿಲ್ಲೆಯಲ್ಲಿ ಒಟ್ಟು 22 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

    ಪ್ರತಿಯೊಂದು ಖರೀದಿ ಕೇಂದ್ರಗಳಿಗೆ ಕೃಷಿ ಇಲಾಖೆಯಿಂದ ಗ್ರೇಡರ್‌ಗಳನ್ನು ನೇಮಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ರೈತರ ಫ್ರೂಟ್ಸ್ ಗುರುತಿನ ಸಂಖ್ಯೆಯ ನೋಂದಣಿ ಕಡ್ಡಾಯವಾಗಿದೆ. ಅಂತಹ ರೈತರಿಂದ ಮಾತ್ರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಅವಕಾಶವಿರುತ್ತದೆ. ಖರೀದಿ ಕೇಂದ್ರಗಳಲ್ಲಿ ಅಂತರ್ಜಾಲ ವ್ಯವಸ್ಥೆ, ಕಂಪ್ಯೂಟರ್, ಪ್ರಿಂಟರ್ ಮತ್ತು ಅದಕ್ಕೆ ಬೇಕಾಗುವ ಇನ್ನಿತರ ಅಗತ್ಯ ಉಪಕರಣಗಳು, ಲೇಖನ ಸಾಮಗ್ರಿಗಳ ವ್ಯವಸ್ಥೆ ಮಾಡಿಕೊಂಡು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಖರೀದಿ ಪ್ರಕ್ರಿಯೆ ನಂತರ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಟಿ ಮೂಲಕ ಜಮಾ ಆಗುವಂತೆ ಪಾವತಿಗೆ ಕ್ರಮ ಕೈಗೊಳ್ಳಬೇಕು. ಮೇಲ್ವಿಚಾರಣೆಗಾಗಿ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

    ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕೃಷಿ ಮಾರುಕಟ್ಟೆ ಇಲಾಖೆ ಸಹಾಯಕ ನಿರ್ದೇಶಕ ಎನ್.ಎ.ಲಕ್ಕುಂಡಿ, ಮಾರ್ಕೆಟ್ ಫೆಡರೇಷನ್‌ನ ಪ್ರತಿನಿಧಿ ಲಿಂಗರಾಜ ಜಮಖಂಡಿ, ಎಪಿಎಂಸಿ ಕಾರ್ಯದರ್ಶಿ ಜಮಖಂಡಿಯ ಎಸ್.ಎನ್.ಪತ್ತಾರ, ಹುನಗುಂದದ ನದ್ಾ ಉಪಸ್ಥಿತರಿದ್ದರು.

    22 ಕಡೆ ಖರೀದಿ ಕೇಂದ್ರ
    ಬಾಗಲಕೋಟೆ ತಾಲೂಕಿನಲ್ಲಿ ಬಾಗಲಕೋಟೆಯ ಟಿ.ಎ.ಪಿ.ಸಿ.ಎಂ.ಎಸ್., ಹಳ್ಳೂರ, ಅಚನೂರ, ಬೆನಕಟ್ಟಿ ಗ್ರಾಮದ ಪಿ.ಕೆ.ಪಿ.ಎಸ್, ಹುನಗುಂದ ತಾಲೂಕಿನಲ್ಲಿ ಇಳಕಲ್ಲ, ನಂದವಾಡಗಿ, ಹಿರೇಆದಾಪುರ, ಕೂಡಲಸಂಗಮ, ಕಂದಗಲ್ಲ, ಬೂದಿಹಾಳ, ಕರಡಿ ಪಿ.ಕೆ.ಪಿ.ಎಸ್, ಬಾದಾಮಿ ಪಿ.ಕೆ.ಪಿ.ಎಸ್., ಬೀಳಗಿ ಟಿ.ಎ.ಪಿ.ಸಿ.ಎಂ.ಎಸ್., ಮುಧೋಳ, ಜಮಖಂಡಿ ತಾಲೂಕಿನ ರೈತರಿಗೆ ಜಮಖಂಡಿ ಟಿ.ಎ.ಪಿ.ಸಿ.ಎಂ.ಎಸ್. ಸೇರಿ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಸಲು ಜಿಲ್ಲೆಯಲ್ಲಿ ಒಟ್ಟು 22 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

    ಖರೀದಿ ಕೇಂದ್ರದಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಯನ್ನು ಖರೀದಿಸಬಾರದು. ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಎಚ್ಚರಿಕೆ ವಹಿಸಬೇಕು.
    – ಮಹಾದೇವ ಮುರಗಿ ಅಪರ ಜಿಲ್ಲಾಧಿಕಾರಿ



    ಜಿಲ್ಲೆಯಲ್ಲಿ ನೋಂದಣಿ ಪ್ರಾರಂಭ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts