More

    ಲಸಿಕೆ ಡ್ರೈ ರನ್ ಕಾರ್ಯ ಪರಿಶೀಲನೆ

    ಬಾಗಲಕೋಟೆ : ಜಿಲ್ಲೆಯಲ್ಲಿ 6 ಸರ್ಕಾರಿ ಹಾಗೂ ಒಂದು ಖಾಸಗಿ ಕೇಂದ್ರ ಸೇರಿ ಒಟ್ಟು 7 ಮಾದರಿ ಲಸಿಕಾ ಕೇಂದ್ರಗಳಲ್ಲಿ ಶುಕ್ರವಾರ ಕೋವಿಡ್-19 ಲಸಿಕೆ ಡ್ರೈ ರನ್ (ಪೂರ್ವಾಭ್ಯಾಸ) ನಡೆಸಲಾಯಿತು.

    ನವನಗರದಲ್ಲಿರುವ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ, ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಇಳಕಲ್ಲ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ಬಾದಾಮಿ, ಮುಧೋಳ, ಬೀಳಗಿ ತಾಲೂಕು ಆಸ್ಪತ್ರೆ ಕೇಂದ್ರ ಹಾಗೂ ಹಾನಗಲ್ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ವರಗೆ ಕರೊನಾ ಲಸಿಕೆಯ ತಾಲೀಮು ನಡೆಸಲಾಯಿತು.

    ಬಾಗಲಕೋಟೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಯಶವಂತ ಗುರುಕಾರ ನವನಗರದ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದಲ್ಲಿ ಸ್ಥಾಪಿಸಲಾದ ಮಾದರಿ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆಯ ಸಂಗ್ರಹ, ಸಾಗಣೆ, ಡಿ-ಫ್ರೀಜ್ ಕಾರ್ಯಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೂ ಡ್ರೈ ರನ್ ಕಾರ್ಯ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿ 7 ಮಾದರಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ಮಾಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲಿ 5 ಸಿಬ್ಬಂದಿ ಹೆಸರುಗಳುಳ್ಳ 5 ಜನ ತಂಡದ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲಿ 25 ಸಿಬ್ಬಂದಿಗೆ ಕರೊನಾ ಲಸಿಕೆ ತಾಲೀಮು ಮಾಡಲಾಗುತ್ತಿದೆ. ಲಸಿಕೆ ನೀಡಿದ ನಂತರ 30 ನಿಮಿಷಗಳ ಕಾಲ ರೋಗಿಯ ಆರೋಗ್ಯವನ್ನು ಪರಿಶೀಲಿಸಲಾಗುತ್ತಿದೆ. ರೋಗಿಯ ಆರೋಗ್ಯದಲ್ಲಿ ವೈಪರಿತ್ಯ ಉಂಟಾದರೆ ತಕ್ಷಣ ತುರ್ತು ಚಿಕಿತ್ಸೆ ನೀಡಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts