More

    ಕೋವಿಶೀಲ್ಡ್ ಲಸಿಕೆ ಪಡೆದ ಸಿಇಒ ಟಿ.ಭೂಬಾಲನ್

    ಬಾಗಲಕೋಟೆ: ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಕೋವಿಶಿಲ್ಡ್ ಲಸಿಕೆ ಪಡೆದುಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಸೋಮವಾರ ಚಾಲನೆ ದೊರೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ ಕಾರ್ಯಕರ್ತೆಯರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 6876 ಜನ ಹೆಸರು ನೋಂದಾಯಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ 844, ಗ್ರಾಮೀಣಾಭಿವೃದ್ಧ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ 2310, ಪೊಲೀಸ್ ಇಲಾಖೆಯ 2792, ಪೌರಾಡಳಿತ ಇಲಾಖೆಯ 930 ಇದ್ದಾರೆ ಎಂದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ, ಮೂರು ದಿನಗಳ ಕಾಲ ಎರಡನೇ ಹಂತದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 20 ಕೇಂದ್ರಗಳಲ್ಲಿ ಕೋವಿಶಿಲ್ಡ್ ಲಸಿಕೆ ಹಾಕಲಾಗುತ್ತಿದೆ. ಸೋಮವಾರ ಒಟ್ಟು 585 ಜನ ಲಸಿಕೆ ಪಡೆದ್ದಾರೆ. ಅದರಲ್ಲಿ ಹೆಲ್ತಕೇರ್ ವರ್ಕರ್ಸ್‌ 90 ಹಾಗೂ ಫ್ರಂಟ್ ಲೈನ್ ವರ್ಕರ್ಸ್‌ 495 ಜನ ಇದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಲಸಿಕೆಯನ್ನು ಪಡೆದರು. ಜಿಲ್ಲಾ ಶಸ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕೋವಿಡ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಿ.ಎಸ್.ಜವಳಿ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts